ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ದಾವಣಗೆರೆಯಲ್ಲಿ ನಡೆಯುವ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ‘ಘೋಷಣೆ’ಸ್ಪರ್ಧೆಯಲ್ಲಿ ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ಅಂತಿಮ ಬಿಬಿಎ ವಿದ್ಯಾರ್ಥಿನಿ ಶೃದ್ಧಾ ಆರ್., ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.
ಅವರಿಗೆ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ. ಎಮ್. ಸುಕುಮಾರ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ, ಸಾಂಸ್ಕೃತಿಕ ತಂಡದ ಸಂಯೋಜಕರಾದ ದೀಪಿಕಾ ಜಿ., ಬೋಧಕ-ಬೋಧಕೇತರ ವರ್ಗದವರು, ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.