ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕಾರ್ಕಳ ಯಕ್ಷ ರಂಗಾಯಣವು ತಾನು ಸಿದ್ದಪಡಿಸುವ ನಾಟಕಗಳು ಹಾಗೂ ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು 3 ಜನ ತಂತ್ರಜ್ಞರು (ಸಂಗೀತ/ಧ್ವನಿ ಸಂಯೋಜಕರು-1, ಬೆಳಕಿನ ವಿನ್ಯಾಸ-1, ರಂಗಸಜ್ಜಿಕೆ-ಪರಿಕರ-1) ಹಾಗೂ 12 ಮಂದಿ ಕಲಾವಿದರನ್ನು ನೇಮಕ ಮಾಡಿಕೊಳ್ಳಲು ರಂಗಭೂಮಿಯಲ್ಲಿ ಅನುಭವವಿರುವ ಆಸಕ್ತ 18 ರಿಂದ 32 ವರ್ಷದೊಳಗಿನ ಕಲಾವಿದರು ಮತ್ತು 25 ರಿಂದ 40 ವರ್ಷದೊಳಗಿನ ತಂತ್ರಜ್ಞರಿAದ ಅರ್ಜಿ ಆಹ್ವಾನಿಸಲಾಗಿದೆ.
ರಾಷ್ಟಿçÃಯ ನಾಟಕ ಶಾಲೆಯ ಪದವಿ, ರಾಜ್ಯದ ಯಾವುದೇ ರಂಗಶಿಕ್ಷಣ ಕೇಂದ್ರದ ರಂಗಶಿಕ್ಷಣ ಪದವಿ ಅಥವಾ ಡಿಪ್ಲೋಮಾ ಹಾಗೂ ರಾಜ್ಯ ಸರ್ಕಾರ ಅಂಗೀಕೃತ ವಿಶ್ವವಿದ್ಯಾಲಯದಿಂದ ನಾಟಕ ವಿಭಾಗದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದವರಿಗೆ ಹಾಗೂ ಆಯಾ ತಾಂತ್ರಿಕ ವಿಷಯಗಳಲ್ಲಿ ಪರಿಣಿತಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ರಂಗಭೂಮಿ ಅನುಭವ ಅಪೇಕ್ಷಣೀಯ.
ಆಸಕ್ತ ಕಲಾವಿದರು ಬಿಳಿ ಹಾಳೆಯ ಮೇಲೆ ಸ್ವವಿವರದೊಂದಿಗೆ ಜನವರಿ 15 ರ ಒಳಗಾಗಿ ವಿಶೇಷ ಕರ್ತವ್ಯಾಧಿಕಾರಿ, ಯಕ್ಷ ರಂಗಾಯಣ ಕಛೇರಿ, ಕೋಟಿ ಚೆನ್ನಯ ಥೀಂ ಪಾರ್ಕ್, ಕಸಬಾ ಗ್ರಾಮ, ಕಾರ್ಕಳ ತಾಲೂಕು – 574104, ಉಡುಪಿ ಜಿಲ್ಲೆ ವಿಳಾಸಕ್ಕೆ ಅಂಚೆ ಅಥವಾ ಇ-ಮೇಲ್ yaksharangayana22@gmai.com ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಮೊ.ನಂ.9980765355, 9900987866 ಹಾಗೂ 7676501443 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದ್ದು, ಈ ಸಂಬAಧ ಸಂದರ್ಶನವನ್ನು 2025 ರ ಜನವರಿ 18 ರಂದು ನಡೆಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.