ವಿಕಲಚೇತನರ ರಿಯಾಯಿತಿ ಬಸ್‌ಪಾಸ್: ಅರ್ಜಿ ಆಹ್ವಾನ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.   
ಉಡುಪಿ:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮಂಗಳೂರು ವಿಭಾಗದ ವತಿಯಿಂದ ಸಕಾಲ ಸಂಬAಧಿತ ಸೇವೆಯಾದ ವಿಕಲಚೇತನರ ರಿಯಾಯಿತಿ ಬಸ್ಸುಪಾಸನ್ನು ಪಡೆಯಲು  ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in ನಲ್ಲಿ ಅಗತ್ಯ ದಾಖಲಾತಿಗಳನ್ನು ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. 

Call us

Click Here

ವಿಕಲಚೇತನರ ಪ್ರಯಾಣಿಕರಿಗೆ ತಮ್ಮ ವಾಸಸ್ಥಳದಿಂದ 100 ಕಿ.ಮೀ ವ್ಯಾಪ್ತಿಯಲ್ಲಿ ಪ್ರಯಾಣಿಸಲು ರಿಯಾಯಿತಿ ದರದಲ್ಲಿ 2024 ನೇ ಸಾಲಿನಲ್ಲಿ ವಿತರಿಸಿರುವ ಬಸ್ಸು ಪಾಸುಗಳ ಅವಧಿಯು 2024 ರ ಡಿಸೆಂಬರ್ 31 ಕ್ಕೆ ಮುಕ್ತಾಯಗೊಂಡಿದ್ದು, 2025 ನೇ ಸಾಲಿಗಾಗಿ ಈ ಬಸ್ಸು ಪಾಸುಗಳನ್ನು ಜನವರಿ 01 ರಿಂದ ನವೀಕರಿಸಲು ಅವಕಾಶ ಕಲ್ಪಿಸಲಾಗಿದೆ.

ವಿಕಲಚೇತನರ ರಿಯಾಯಿತಿ ಬಸ್ಸು ಪಾಸುಗಳನ್ನು ಫಲಾನುಭವಿಗಳು ಬಂದು ನವೀಕರಿಸಿಕೊಳ್ಳಲು ಅನುಕೂಲವಾಗುವಂತೆ 2024 ನೇ ಸಾಲಿನಲ್ಲಿ ವಿತರಿಸಿದ ಪಾಸುಗಳನ್ನು 2025 ರ ಫೆಬ್ರವರಿ 28 ರವರೆಗೆ  ಮಾನ್ಯ ಮಾಡಲಾಗುವುದು ಎಂದು ಮಂಗಳೂರು ಕ.ರಾ.ರ.ಸಾ. ನಿಗಮದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Leave a Reply