ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಹೆಬ್ರಿ ತಾಲೂಕಿನ ಶೇಡಿಮನೆ ಗ್ರಾಮದ ಅರಸಮ್ಮಕಾನು ಅಂಚೆ ಕಚೇರಿ ಬಳಿ ಡಿ.29ರಂದು ಎದುರು ಕಡೆಯಿಂದ ಅತೀ ವೇಗವಾಗಿ ಬಂದ ಬಲೇನೋ ಕಾರು ಬೈಕಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ಪರಿಣಾಮ ಬೈಕ್ ಸವಾರ ರಂಜಿತ್ ಅವರು ಗಂಭೀರವಾಗಿ ಗಾಯಗೊಂಡರು. ಸವಾರ ನವೀನ್ (21) ಸಣ್ಣಪುಟ್ಟ ಗಾಯಗಳಾಗಿವೆ.
ಗಂಭೀರವಾಗಿ ಗಾಯಗೊಂಡ ರಂಜೀತ್ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನವೀನ್ ನೀಡಿರುವ ದೂರಿನಂತೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.