ಜ.05ರಿಂದ 3 ದಿನಗಳ ಕಾಲ ಬೈಂದೂರಿನಲ್ಲಿ ಯಕ್ಷ – ಗೊಂಬೆ ವೈಭವ. ಆಮಂತ್ರಣ ಪತ್ರಿಕೆ ಬಿಡುಗಡೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಕಲಾ ಸಂಸ್ಥೆಗಳು ಊರನ್ನು ಸಾಂಸ್ಕೃತಿಕವಾಗಿ ಸಮೃದ್ಧವನ್ನಾಗಿಸುತ್ತದೆ. ದಿನವೂ ದಣಿಯುವ ದೇಹ ಹಾಗೂ ಮನಸ್ಸಿಗೆ ಮತ್ತೆ ಚೈತನ್ಯ ತುಂಬುವ ಕಾರ್ಯವನ್ನು ಕ್ರೀಡೆ, ಕಲೆ, ಸಾಹಿತ್ಯದಂತಹ ಸದಭಿರುಚಿಯ ಚಟುವಟಿಕೆಗಳು ಮಾಡುತ್ತದೆ ಎಂದು ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮಂಜುನಾಥ ಪಿ. ನಾಯ್ಕ್‌ ಹೇಳಿದರು.

Call us

Click Here

ಅವರು ಸುರಭಿ ರಿ. ಬೈಂದೂರು ಇದರ ರಜತಯಾನದ ತಿಂಗಳ ತಿರುಳು ಕಾರ್ಯಕ್ರಮದ ಅಂಗವಾಗಿ ಸಮಷ್ಟಿ ಪ್ರತಿಷ್ಠಾನ ರಿ. ಹಾಗೂ ಸ್ನೇಹ ತರಂಗ ಬೈಂದೂರು ಸಹಯೋಗದೊಂದಿಗೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಜನವರಿ 05ರಿಂದ 07ರ ತನಕ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ಯಕ್ಷ – ಗೊಂಬೆ ವೈಭವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಇಲ್ಲಿನ ರತ್ತೂಬಾಯಿ ಜನತಾ ಪ್ರೌಢಶಾಲೆಯಲ್ಲಿ ಬುಧವಾರ ಬಿಡುಗಡೆಗೊಳಿಸಿ ಮಾತನಾಡಿದರು.

ಸುರಭಿ ಅಧ್ಯಕ್ಷ ಆನಂದ ಮದ್ದೋಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಮೊದಲ ದಿನದಂದು ಶ್ರೀ ಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿ ಉಪ್ಪಿನಕುದ್ರು ಇವರಿಂದ ಚೂಡಾಮಣಿ  – ಲಂಕಾದಹನ ಗೊಂಬೆಯಾಟ ಹಾಗೂ ಗೊಂಬೆಯಾಟ ಪ್ರಾತ್ಯಕ್ಷಿಕೆ ನಡೆಯಲಿದೆ. ಜ.06ರಂದು ಶ್ರೀ ರೇಣುಕಾ ಮಾತೆ ತೊಗಲು ಗೊಂಬೆ ಮೇಳ, ಅಂಬಳೆ ಚಿಕ್ಕಮಗಳೂರು ಇವರಿಂದ ತೊಗಲು ಗೊಂಬೆಯಾಟ ಸುಪ್ರಭಾ ವಿಲಾಸ ಜರುಗಲಿದೆ. ಜ.07ರಂದು ಯಕ್ಷಗಾನ ಕೇಂದ್ರ ಇಂದ್ರಾಳಿ ಇವರಿಂದ ಜಟಾಯು ಮೋಕ್ಷ ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದರು.

ಯಕ್ಷ ಗೊಂಬೆ ವೈಭವ ಕಾರ್ಯಕ್ರಮವು ಬೈಂದೂರಿನ ಶಾರದಾ ವೇದಿಕೆಯಲ್ಲಿ ಪ್ರತಿದಿನ ಸಂಜೆ 6:30ಕ್ಕೆ ನಡೆಯಲಿದೆ. ಕಾರ್ಯಕ್ರಮವನ್ನು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹಾಲಿಂಗ ನಾಯ್ಕ್‌ ಉದ್ಘಾಟಿಸಲಿದ್ದಾರೆ. ಮೂರು ದಿನಗಳ ಕಾಲ ವಿವಿಧ ಅತಿಥಿ ಗಣ್ಯರು ಭಾಗವಹಿಸಲಿದ್ದು, ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಸಮಾರೋಪ ನುಡಿಗಳನ್ನಾಡಲಿದ್ದಾರೆ.

ಸಮಷ್ಟಿ ಪ್ರತಿಷ್ಠಾನದ ಮ್ಯಾನೇಜಿಂಗ್‌ ಟ್ರಸ್ಟೀ ಸುನಿಲ್‌ ಹೆಚ್‌. ಜಿ ಉಪಸ್ಥಿತರಿದ್ದರು. ಸುರಭಿ ನಿರ್ದೇಶಕ ಸುಧಾಕರ ಪಿ. ಬೈಂದೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ರಾಮಕೃಷ್ಣ ದೇವಾಡಿಗ ಸ್ವಾಗತಿಸಿ, ಉಪಾಧ್ಯಕ್ಷ ಲಕ್ಷ್ಮಣ ಕೊರಗ ವಂದಿಸಿದರು.

Click here

Click here

Click here

Click Here

Call us

Call us

Leave a Reply