ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶ್ರೀ ದುರ್ಗಾ ಆಂಗ್ಲ ಮಾಧ್ಯಮ ಶಾಲೆ ಕೊಕ್ಕರ್ಣೆಯಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಶ್ರಾವಣಿ ಮಂಜುನಾಥ ನಾಯಕ್ ಇವರು ಹಿಂದಿ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.