ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ವಿದ್ಯಾರ್ಥಿಗಳು ಯಾವುದೇ ಭಯ ಇಲ್ಲದೆ ಎದುರಿಸುವಂತಾಗಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಹೆಚ್ಚಿನ ಪ್ರೇರಣೆ, ಪ್ರೋತ್ಸಾಹ ವಿದ್ಯಾರ್ಥಿಗಳಿಗೆ ದೊರೆಯುವಂತಾಗಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಇರುವ ಸಮಯವನ್ನು ವಿದ್ಯಾರ್ಥಿಗಳು ಸರಿಯಾಗಿ ಬಳಸಿಕೊಂಡು, ಧೈರ್ಯದಿಂದ ಪರೀಕ್ಷೆಯನ್ನು ಎದುರಿಸಿ ಉತ್ತಮ ಅಂಕಗಳನ್ನು ಪಡೆಯುವಂತಾಗಬೇಕು ಎಂದು ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯ ಕ್ಷೇತ್ರ ಸಮನ್ವಯಾಧಿಕಾರಿ ಅಶೋಕ ನಾಯ್ಕ್ ಹೇಳಿದರು.
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಕಾಲೇಜಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಒಳಾಂಗಣದಲ್ಲಿ ಆಯೋಜಿಸಲಾಗಿದ್ದ ಗಂಗೊಳ್ಳಿ ಕ್ಲಸ್ಟರ್ ಮಟ್ಟದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಪ್ರೇರಣಾ ಶಿಬಿರವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾಲೇಜಿನ ಆಡಳಿತ ಮಂಡಳಿ ಸದಸ್ಯ ಕೆ. ರಾಮನಾಥ ನಾಯಕ್ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ಶಿಕ್ಷಣ ಸಂಯೋಜಕ ಶೇಖರ್ ಮತ್ತು ಗಂಗೊಳ್ಳಿ ಕ್ಲಸ್ಟರ್‌ನ ಸಿಆರ್‌ಪಿ ಪ್ರದೀಪ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಗಂಗೊಳ್ಳಿ ಕ್ಲಸ್ಟರ್‌ನ ವಿವಿಧ ಶಾಲೆಗಳ ಸುಮಾರು ೨೦೦ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದ್ದರು.
ಉಪನ್ಯಾಸಕ ಸುಜಯೀಂದ್ರ ಹಂದೆ ಸ್ವಾಗತಿಸಿದರು. ಉಪನ್ಯಾಸಕಿ ಸುಗುಣ ಆರ್.ಕೆ. ಕಾರ್ಯಕ್ರಮ ನಿರ್ವಹಿಸಿದರು. ಉಪನ್ಯಾಸಕಿ ಪವಿತ್ರಾ ವಂದಿಸಿದರು.