ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ. ನಾರಾಯಣ ಸ್ವಾಮಿ ವಂಡ್ಸೆ ಜ.3ರಂದು ಗ್ರಾಮ ಪಂಚಾಯತ್‌ಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ರಾಜ್ಯ ಹಣಕಾಸು ಆಯೋಗದ ಸದಸ್ಯರುಗಳಾದ ಮೊಹಮ್ಮದ್ ಸನಾವುಲ್ಲ ಐಎಎಸ್, ಆರ್‌ಎಸ್ ಪೋಂಡೆ, ರಾಜ್ಯ ಹಣಕಾಸು ಆಯೋಗದ ಸಮಾಲೋಚಕರಾದ ಎಮ್. ಕೆಕೆಂಪೇಗೌಡ, ಸಿ. ಜಿ ಸುಪ್ರಸನ್ನ, ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಕೆ. ಯಾಲಕ್ಕಿ ಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಉದಯ ಶೆಟ್ಟಿ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರವಿಕುಮಾರ್ ಹುಕ್ಕೇರಿ, ಪಂಚಾಯತ್ ರಾಜ್ ಸಂಪನ್ಮೂಲ ವ್ಯಕ್ತಿ ಎಸ್. ಜನಾರ್ಧನ್, ವಂಡ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಅವಿನಾಶ್, ಚಿತ್ತೂರು ಗ್ರಾ.ಪಂ. ಅಧ್ಯಕ್ಷ ರವೀಂದ್ರ ಶೆಟ್ಟಿ, ಇಡೂರು ಗ್ರಾ.ಪಂ.ಅಧ್ಯಕ್ಷೆ ಆಶಾ ಆಚಾರ್ಯ, ಕೆರಾಡಿ ಗ್ರಾ.ಪಂ. ಅಧ್ಯಕ್ಷ ಸುದರ್ಶನ ಶೆಟ್ಟಿ, ಆಲೂರು ಗ್ರಾ.ಪಂ. ಅಧ್ಯಕ್ಷ ರಾಜೇಶ್ ದೇವಾಡಿಗ, ಹಕ್ಲಾಡಿ ಗ್ರಾ.ಪಂ. ಅಧ್ಯಕ್ಷೆ ಪ್ರೇಮಾ ದೇವಾಡಿಗ, ವಂಡ್ಸೆ ಗ್ರಾ.ಪಂ. ಉಪಾಧ್ಯಕ್ಷ ಮತ್ತು ಸದಸ್ಯರು ಹಾಗೂ ವಂಡ್ಸೆ, ಚಿತ್ತೂರು, ಇಡೂರು, ಆಲೂರು, ಹಕ್ಲಾಡಿ, ಹೆಮ್ಮಾಡಿ, ಕೆರಾಡಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಂಡ್ಸೆ ಗ್ರಾಮ ಪಂಚಾಯತ್ ನಲ್ಲಿ ವಿಶೇಷವಾಗಿ ಅನುಷ್ಠಾನಿಸಲಾಗುತ್ತಿರುವ ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಿ ಮಾಹಿತಿ ಪಡೆದುಕೊಂಡರು.