ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮುದಾಯ ಅಭಿವೃದ್ಧಿಯ ಜ್ಞಾನದೀಪ ಕಾರ್ಯಕ್ರಮದ ಮೂಲಕ ಶಾಲೆಗಳಿಗೆ ಬೆಂಚು ಡೆಸ್ಕ್ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಮಂಜೂರು ಮಾಡಿದ್ದು, ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ರೂ. 85,000 ಮೌಲ್ಯದ 10 ಸೆಟ್ ಬೆಂಚು ಡೆಸ್ಕ್ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗೋವರ್ಧನ್ ಜೋಗಿ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಕಾರ್ಯದರ್ಶಿ ಉದಯಕುಮಾರ್ ಶೆಟ್ಟಿ, ಜನಜಾಗೃತಿ ವೇದಿಕೆಯ ಪದಾಧಿಕಾರಿ ವೆಂಕಟೇಶ್ ಶೆಟ್ಟಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಂಡ್ಸೆ ವಲಯ ಮೇಲ್ವಿಚಾರಕರಾದ ಚಂದ್ರ ಮಧುವನ, ವಂಡ್ಸೆ ಒಕ್ಕೂಟದ ದಾಮೋದರ್, ಗಿರೀಶ್, ನಯನ, ಸೇವಾಪ್ರತಿನಿಧಿ ಯಶೋಧಾ, ವನಿತಾ, ಮಮತಾ, ನಾಗರತ್ನ, ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದದವರು, ಎಸ್.ಡಿಎಂಸಿ ಅವರು ಉಪಸ್ಥಿತರಿದ್ದರು.