ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಟಾಟಾ ಕನ್ಸಲ್ಟೆನ್ಸೀಸ್ ಸರ್ವಿಸಸ್ (ಟಿಸಿಎಸ್) ಕಂಪನಿಯ ಮಾಜಿ ಸಿ.ಇ.ಒ. ಹಾಗೂ ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್ ನಿರ್ದೇಶಕರಾದ ರಾಜೇಶ್ ಗೋಪಿನಾಥನ್ ಅವರು ತಮ್ಮ ಕುಟುಂಬದೊಂದಿಗೆ ಇತ್ತೀಚಿಗೆ ಭೇಟಿ ನೀಡಿ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಆಡಳಿತ ಧರ್ಮದರ್ಶಿ ಕೆ. ಶ್ರೀರಮಣ ಉಪಾಧ್ಯಾಯ ಅವರು ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, ಆಶೀರ್ವದಿಸಿದರು. ದೇವಸ್ಥಾನದ ಮ್ಯಾನೇಜರ್ ನಟೇಶ್ ಕಾರಂತ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.