ರಾಗಿಹಕ್ಲು ಸ.ಹಿ.ಪ್ರಾ ಶಾಲೆಯ ನೂತನ ಸಭಾಂಗಣ ಉದ್ಘಾಟನೆ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು:
ಪ್ರತಿಯೊಂದು ಸರ್ಕಾರಿ ಶಾಲೆಗಳು ಉನ್ನತ ಮಟ್ಟಕ್ಕೇರಬೇಕಾದರೆ ಆ ಶಾಲೆಯಲ್ಲಿ ಕಲಿತ ಹಳೆ ವಿದ್ಯಾರ್ಥಿಗಳು ಪ್ರಮುಖ ಪಾತ್ರ ವಹಿಸುತ್ತಾರೆ. ಹಾಗೆಯೇ ಈ ಶಾಲೆಯಲ್ಲಿಯೂ ಕೂಡ ಹಳೆವಿದ್ಯಾರ್ಥಿಗಳು ದಾನಿಗಳ ಸಹಕಾರದಿಂದ ಸುಮಾರು ರೂ.15 ಲಕ್ಷದ ವೆಚ್ಚದಲ್ಲಿ ಸಭಾಭವನವನ್ನು ನಿರ್ಮಿಸುವ ಮೂಲಕ ಇತರರಿಗೂ ಮಾದರಿಯಾಗಿದ್ಧಿರಿ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. 

Call us

Click Here

ರಾಗಿಹಕ್ಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ ಮತ್ತು ನೂತನ ಸಭಾಂಗಣ ಉದ್ಘಾಟಿಸಿ ಮಾತನಾಡಿದರು. ಮುಂದಿನ ದಿನಗಳಲ್ಲಿ ಮಕ್ಕಳಿಗೆ ವಾಹನ ವ್ಯವಸ್ಥೆ ಮತ್ತು ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ವಿವಿಧ ಯೋಜನೆ ರೂಪಿಸಿರುವುದು ಕೂಡ ಶ್ಲಾಘನೀಯ ಎಂದರು.

ಎಸ್‌ಡಿಎಂಸಿ ಅಧ್ಯಕ್ಷ ರವಿ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ದಾನಿಗಳಿಗೆ ಮತ್ತು ಈ ಹಿಂದೆ ಈ ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರಿಗೆ ಸನ್ಮಾನಿಸಲಾಯಿತು.. ಕಲಿಕೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ರವೀಂದ್ರ ಪೂಜಾರಿ ಮತ್ತು ತಂಡದವರು ಪ್ರೋತ್ಸಾಹ ಧನವನ್ನು ನೀಡಿ ಗೌರವಿಸಿದರು. ಶಾಲೆಯ ವಿದ್ಯಾರ್ಥಿಗಳಿಗೆ ಮತ್ತು ಹಳೆ ವಿದ್ಯಾರ್ಥಿಗಳಿಗೆ ನಡೆದ ವಿವಿಧ ಸಾಂಸ್ಕೃತಿಕ ಮತ್ತು ಕ್ರೀಡಾಕೂಟದ ವಿಜೇತರಿಗೆ ಬಹುಮಾನ ವಿತರಿಸಿಸಲಾಯಿತು.

ಮುಖ್ಯ ಅತಿಥಿಯಾಗಿ ತಾಪಂ ಮಾಜಿ ಅಧ್ಯಕ್ಷ ಮಹೇಂದ್ರ ಪೂಜಾರಿ, ಗ್ರಾಪಂ ಉಪಾಧ್ಯಕ್ಷ ಶ್ರೀನಿವಾಸ ಪೂಜಾರಿ, ಸದಸ್ಯ ಸುರೇಶ್ ನಾಯ್ಕ, ಪ್ರಾಶಾಶಿ ಸಂಘದ ಅಧ್ಯಕ್ಷ ಶೇಖರ ಪೂಜಾರಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮೇಶ ಪೂಜಾರಿ, ಶಾಲಾ ಮುಖ್ಯಶಿಕ್ಷಕ ಸಂಜು ಗೌಡ ಕೆ., ಪ್ರಮುಖರಾದ ಪ್ರದೀಪ್ ಶೆಟ್ಟಿ, ನಾಗರಾಜ್ ಬಿಡುವಾಳ್, ಶರತ್ ಗಾಣಿಗ, ವಿದ್ಯಾರ್ಥಿ ನಾಯಕಿ ನಾಗಶ್ರೀ ಉಪಸ್ಥಿತರಿದ್ದರು.

ಅಧ್ಯಾಪಕ ಶಶಿಧರ ಶೆಟ್ಟಿ ಕಾರ್ಯಕ್ರಮವನ್ನು ನಿರ್ವಹಿಸಿದರು. ನಂತರ ಶಾಲಾ ವಿದ್ಯಾರ್ಥಿಗಳಿಂದ, ಅಂಗನವಾಡಿ ಮಕ್ಕಳಿಂದ ಮತ್ತು ಹಳೆ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಮನೋರಂಜನ ಕಾರ್ಯಕ್ರಮವು ನಡೆಯಿತು.

Click here

Click here

Click here

Click Here

Call us

Call us

Leave a Reply