Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜ್ಞಾನಾರ್ಜನೆಯೊಂದಿಗೆ ಉತ್ತಮ ಸಂಸ್ಕಾರ ಅತ್ಯಗತ್ಯ: ಶ್ರೀ ಗೋಪಾಲಕೃಷ್ಣ ಸಾಮಗ ಬಿ.
    ಊರ್ಮನೆ ಸಮಾಚಾರ

    ಜ್ಞಾನಾರ್ಜನೆಯೊಂದಿಗೆ ಉತ್ತಮ ಸಂಸ್ಕಾರ ಅತ್ಯಗತ್ಯ: ಶ್ರೀ ಗೋಪಾಲಕೃಷ್ಣ ಸಾಮಗ ಬಿ.

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಜ್ಞಾನಾರ್ಜನೆಯ ಜೊತೆಗೆ ವಿದ್ಯಾರ್ಥಿಗಳು ಉತ್ತಮ ಸಂಸ್ಕೃತಿಯನ್ನು ರೂಢಿಸಿಕೊಂಡಾಗ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದು ಉಪಪ್ರಧಾನ ವ್ಯವಸ್ಥಾಪಕರು, ಮಾನವ ಸಂಪನ್ಮೂಲ ಇಲಾಖೆ, ಕರ್ಣಾಟಕ ಬ್ಯಾಂಕ್, ಮಂಗಳೂರು ಪ್ರಧಾನ ಕಚೇರಿ ಗೋಪಾಲಕೃಷ್ಣ ಸಾಮಗ ಬಿ. ಹೇಳಿದರು.

    Click Here

    Call us

    Click Here

    ಅವರು ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದಲ್ಲಿ ಕ್ರಿಯೇಟಿವ್ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಸಹ ಸಂಸ್ಥಾಪಕರಾದ ಗಣಪತಿ ಭಟ್ ಕೆ. ಎಸ್. ಅವರು ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ, ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಸಾಗಿಬಂದ ಸಾಧನೆಯ ಹಾದಿಯ ಸಮಗ್ರ ಮಾಹಿತಿಗಳನ್ನು ಒದಗಿಸಿದರು.

    ಮುಖ್ಯ ಅತಿಥಿ ಎನ್ ಸಿ ಎಸ್ ಮತ್ತು ಕೋ. ಸ್ಥಾಪಕರಾದ ಅಂ ನಿತೇಶ್ ಶೆಟ್ಟಿ ಅವರು ಮಾತನಾಡಿ, ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ ಮತ್ತು ಇದು ಇತರೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಬೇಕು ಎಂದರು.

    ಪ್ರಧಾನ ಶಿಲ್ಪಿಗಳಾದ ಎಂಡಿ ಸುನಿಲ್ ಕುಮಾರ್ ಅವರು ಮಾತನಾಡಿ, ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಮಕ್ಕಳು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಲು ಸಹಕಾರಿ ಎಂದರು.

    Click here

    Click here

    Click here

    Click Here

    Call us

    Call us

    ಹಿರ್ಗಾನ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷರಾದ ಸಂತೋಷ್‌ ಶೆಟ್ಟಿ ಅವರು ಮಾತನಾಡುತ್ತಾ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಸಾಧಿಸಿದರೆ ಮುಂದೆ ಸುಲಭವಾಗಿ ಗುರಿ ಮುಟ್ಟಬಹುದು ಎಂದು ಹೇಳಿದರು. ಸಹ ಸಂಸ್ಥಾಪಕರಾದ ಅಮೃತ್ ರೈ ಅವರು ಅಧ್ಯಕ್ಷೀಯ ನುಡಿಗಳನ್ನಾಡುತ್ತಾ, ಕ್ರಿಯೇಟಿವ್ ಕಾಲೇಜಿನ ಉನ್ನತಿಗೆ ಸಹಕರಿಸಿದವರನ್ನು ಸ್ಮರಿಸಿದರು. ವಿದ್ಯೆಯ ಜೊತೆಗೆ ಗುಣನಡತೆಯೂ ಮುಖ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

    ಈ ಸಂದರ್ಭದಲ್ಲಿ ಕಾಲೇಜಿನ ತ್ರೈಮಾಸಿಕ ಪತ್ರಿಕೆ ನಿನಾದ – 10ನೇ ಸಂಚಿಕೆ ಹಾಗೂ ವಾರ್ಷಿಕ ಸಂಚಿಕೆ ಸಪ್ತಸ್ವರವನ್ನು ಬಿಡುಗಡೆಗೊಳಿಸಲಾಯಿತು. ಶ್ರೀ ಗೋಪಾಲಕೃಷ್ಣ ಸಾಮಗರನ್ನು ಕ್ರಿಯೇಟಿವ್ ಶಿಕ್ಷಣ ಪ್ರತಿ?ನದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕ್ರೀಡಾ ಕ್ಷೇತ್ರದಲ್ಲಿ ರಾಜ್ಯಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡಾ ಕ್ಷೇತ್ರದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

    ವೇದಿಕೆಯಲ್ಲಿ ಸಂಸ್ಥೆಯ ಸಪ್ತ ಸಂಸ್ಥಾಪಕರು ಉಪಸ್ಥಿತರಿದ್ದರು. ಸಮಯ ಸಂಜೆ 6.30ರಿಂದ ಕ್ರಿಯೇಟಿವ್ ಯಕ್ಷರಾಧನಂ ಹವ್ಯಾಸಿ ಕಲಾವಿದರಿಂದ ’ವಿದ್ಯಾಮಾತೆ ಶ್ರೀ ಶಾರದೆ ಲೀಲಾಮಾನುಷ ವಿಗ್ರಹ’ ಯಕ್ಷಗಾನ ಪ್ರಸಂಗ ನೆರವೇರಿತು.   ಬೋಧಕ – ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗಿಗಳಾಗಿದ್ದರು.

    ಜೀವಶಾಸ್ತ್ರ ಉಪನ್ಯಾಸಕ ಲೋಹಿತ್ ಎಸ್. ಕೆ. ಸ್ವಾಗತಿಸಿ, ಕನ್ನಡ ಉಪನ್ಯಾಸಕಿ ಪ್ರಿಯಾಂಕ ತೀರ್ಥರಾಮ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    19 + eighteen =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.