ವಿಕಲಚೇತನರು ಸರಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.  
ಉಡುಪಿ:
ವಿಕಲಚೇತನರು ಹಾಗೂ ಹಿರಿಯ ನಾಗರಿಕರು ಆತ್ಮಸ್ಥೈರ್ಯದಿಂದ ಜೀವನ ನಡೆಸಬೇಕು ಎಂಬ ಉದ್ದೇಶದಿಂದ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಯ ಲಾಭ ಪಡೆಯಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

Call us

Click Here

ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾಡಳಿತ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಅಡಿಪ್ ಮತ್ತು ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಅಲಿಂಕೋ ಸಂಸ್ಥೆಯ ವತಿಯಿಂದ ಜಿಲ್ಲೆಯಲ್ಲಿ ಆಯ್ಕೆ ಮಾಡಲಾದ ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ ಉಚಿತ ವಿವಿಧ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವಿಕಲಚೇತನರು ಹಾಗೂ ಹಿರಿಯ ನಾಗರಿಕರಿಗೆ ಶಕ್ತಿ ತುಂಬುವ ಉದ್ದೇಶದಿಂದ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತರುವುದರೊಂದಿಗೆ ಗುಣಮಟ್ಟದ ಸಲಕರಣೆಗಳನ್ನು ದೊರಕುವಂತೆ ಮಾಡಿದೆ. ಜಿಲ್ಲೆಯ ಪ್ರತಿಯೊಬ್ಬ ವಿಕಲಚೇತನರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದರು.

ಇಂದು ನಡೆಯಲಿರುವ ಸಲಕರಣೆ ವಿತರಣಾ ಕಾರ್ಯಕ್ರಮದಲ್ಲಿ ಸುಮಾರು 63 ಲಕ್ಷ ರೂ. ವೆಚ್ಚದಲ್ಲಿ 609 ಫಲಾನುಭವಿಗಳಿಗೆ 962 ವಿವಿಧ ಸವಲತ್ತುಗಳನ್ನು ವಿತರಿಸಲಾಗುತ್ತಿದೆ. ದೇಶದಾದ್ಯಂತ ಈ ಯೋಜನೆಯಡಿ 51 ಕೋಟಿ ರೂ. ವೆಚ್ಚದಲ್ಲಿ ಸಲಕರಣೆಗಳನ್ನು ಹಂಚಲಾಗಿದೆ. ಸಲಕರಣೆಗಳ ದುರಸ್ಥಿಗೆ ಅನುಕೂಲವಾಗುವಂತೆ ಉಡುಪಿ ಜಿಲ್ಲಾ ಕೇಂದ್ರದಲ್ಲಿ ದುರಸ್ತಿ ಕೇಂದ್ರವನ್ನು ಹೊಸದಾಗಿ ಸ್ಥಾಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಾಸ್ತಾವಿಕವಾಗಿ ಮಾತನಾಡಿ, ಸರಕಾರದ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ದೊರಬೇಕೆನ್ನುವ ಉದ್ದೇಶದಿಂದ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿರುವ ವಿಶೇಷಚೇತನರು ಹಾಗೂ ಹಿರಿಯ ನಾಗರಿಕರನ್ನು ಮೌಲ್ಯಮಾಪನ ಮಾಡಿ, ಸಲಕರಣೆಯನ್ನು ವಿತರಿಸಿದ್ದು, ಇದರಿಂದ ಅವರುಗಳು ಘನತೆಯಿಂದ ಸ್ವತಂತ್ರವಾಗಿ ಸಮಾಜದಲ್ಲಿ ಜೀವಿಸಲು ಸಾಧ್ಯವಾಗುತ್ತದೆ. ಫಲಾನುಭವಿಗಳು ಸಲಕರಣೆಯನ್ನು ಪಡೆದು ಅದನ್ನು ಮೂಲೆಗುಂಪು ಮಾಡದೇ ಬಳಸಬೇಕು, ಸಲಕರಣೆಗಳ ಸಣ್ಣ-ಪುಟ್ಟ ದುರಸ್ಥಿಯನ್ನು ಅಲಿಂಕೋ ಸಂಸ್ಥೆಯ ವತಿಯಿಂದಲೇ ಮಾಡಲಾಗುವುದು ಎಂದ ಅವರು, ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲೆಯಲ್ಲಿಯೂ ಸಹ ದುರಸ್ತಿ ಕೇಂದ್ರವನ್ನು ತೆರೆಯಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

Click here

Click here

Click here

Click Here

Call us

Call us

ಶಾಸಕ ಯಶ್‌ಪಾಲ್ ಎ ಸುವರ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇಶದ ಕಟ್ಟಕಡೆಯ ವ್ಯಕ್ತಿಯ ಸಮಸ್ಯೆಯನ್ನು ಆಲಿಸಿ, ಅದನ್ನು ನಿವಾರಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಯಪ್ರವೃತ್ತವಾಗಿದೆ. ಜಿಲ್ಲೆಯಲ್ಲಿ ಫಲಾನುಭವಿಗಳನ್ನು ಗುರುತಿಸಿ, ಸೌಲಭ್ಯವನ್ನು ತಲುಪಿಸುವ  ಕೆಲಸವನ್ನು ಅಲಿಂಕೋ ಸಂಸ್ಥೆಯು ಪರಿಣಾಮಕಾರಿಯಾಗಿ ಮಾಡಿದ್ದಕ್ಕೆ ಪ್ರಶಂಸೆ ವ್ಯಕ್ತಪಡಿಸಿದ ಅವರು, ಸೌಲಭ್ಯ ಪಡೆದ ಫಲಾನುಭವಿಗಳು ಉತ್ತಮ ಜೀವನವನ್ನು ನಡೆಸುವಂತಾಗಲಿ ಎಂದರು. 

 ಇದೇ ಸಂದರ್ಭದಲ್ಲಿ ಅರ್ಹ ಫಲಾನುಭವಿಗಳಿಗೆ ಶ್ರವಣ ಸಾಧನ, ವ್ಹೀಲ್ ಚೇರ್, ಸ್ಮಾರ್ಟ್ಫೋನ್, ಸೇರಿದಂತೆ ಸಾಧನ ಸಲಕರಣೆಯನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಸಕ ಎ ಕಿರಣ್ ಕುಮಾರ್ ಕೊಡ್ಗಿ, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಎಎಸ್‌ಪಿ ಸಿದ್ದಲಿಂಗಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ರತ್ನ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಫಲಾನುಭವಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಸೀನಿಯರ್ ಮ್ಯಾನೆಜರ್ ಮತ್ತು ಅಲಿಂಕೋ ಸಂಸ್ಥೆಯ ಯೂನಿಕ್ ಹೆಡ್ ಎ.ವಿ ಅಶೋಕ್ ಕುಮಾರ್ ಸ್ವಾಗತಿಸಿ, ಗಣನಾಥ ಎಕ್ಕಾರು ಹಾಗೂ ದೀಪಾ ನಿರೂಪಿಸಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲ ಸಿ.ಕೆ. ವಂದಿಸಿದರು.

Leave a Reply