Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಇಂದ್ರಾಳಿ ರೈಲ್ವೇ ಮೇಲ್ಸೆತುವೆ ಕಾಮಗಾರಿ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ಸೂಚನೆ
    ಉಡುಪಿ ಜಿಲ್ಲೆ

    ಇಂದ್ರಾಳಿ ರೈಲ್ವೇ ಮೇಲ್ಸೆತುವೆ ಕಾಮಗಾರಿ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ಸೂಚನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳಿಸದೇ ನಿರ್ಲಕ್ಷ್ಯ ತೋರಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮ ವಹಿಸಬೇಕು ಎಂದು ಅಭಿಯಂತರರಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ 169 ಎ ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಪ್ರಗತಿ ಪರಿಶೀಲನೆ ಕುರಿತು ಚರ್ಚಿಸುವ ಸಲುವಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

     ಉಡುಪಿಯಿಂದ ಮಣಿಪಾಲ್‌ಗೆ ಹೋಗುವ ರಸ್ತೆ ಅಗಲೀಕರಣ ಕಾಮಗಾರಿಯ ಸಂದರ್ಭದಲ್ಲಿ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ಕೈಗೊಳ್ಳಲಾಗಿತ್ತು. ರೈಲ್ವೇ ಇಲಾಖೆಯ ಉಕ್ಕಿನ ಸೇತುವೆ ನಿರ್ಮಾಣ ಮಾಡಬೇಕೆಂದು ಸೂಚನೆ ನೀಡಿದ ಹಿನ್ನಲೆಯಲ್ಲಿ, 2018 ನೇ ಸಾಲಿನಲ್ಲಿ ಉಕ್ಕಿನ ಸೇತುವೆ ನಿರ್ಮಾಣ ಕಾಮಗಾರಿ ಪ್ರಕ್ರಿಯೆಯು ಪ್ರಾರಂಭವಾಗಿ, ಕಳೆದ 5 ವರ್ಷ ಕಳೆದರೂ ಪೂರ್ಣಗೊಳ್ಳದೇ ಸಾರ್ವಜನಿಕರ ಸಂಚಾರಕ್ಕೆ ಅವ್ಯವಸ್ಥೆ ಉಂಟಾಗಿ ಸಾರ್ವಜನಿಕರಿಂದ ದೂರುಗಳು ಪ್ರತಿದಿನವೂ ಕೇಳಿಬರುತ್ತಿದೆ. ಆದರೆ, ಗುತ್ತಿಗೆದಾರರುಗಳು ನಿಗಧಿತ ಕಾಲಾವಧಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸದೇ ಇರುವುದು ಇದಕ್ಕೆಲ್ಲಾ ಕಾರಣ. ಪ್ರಮುಖ ಗುತ್ತಿಗೆದಾರ ಹಾಗೂ ಉಪ ಗುತ್ತಿಗೆದಾರರನ್ನು ಬ್ಲಾಕ್ ಲಿಸ್ಟ್ಗೆ ಸೇರಿಸಲು ಸಂಬಂಧಪಟ್ಟವರಿಗೆ ಪತ್ರ ಬರೆಯುವಂತೆ ಜಿಲ್ಲಾಧಿಕಾರಿ ಅಭಿಯಂತರರಿಗೆ ತಿಳಿಸಿದರು.

    ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿಯ ಕಳೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಗುತ್ತಿಗೆದಾರರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಭಿಯಂತರುಗಳಿಗೆ ರಾತ್ರಿ ಹಾಗೂ ಹಗಲು ಎರಡೂ ಪಾಳಯದಲ್ಲಿ ಕಾರ್ಮಿಕರುಗಳನ್ನು ನಿಯೋಜಿಸಿ, ಕಾಮಗಾರಿಯನ್ನು ಶೀಘ್ರವಾಗಿ ಕೈಗೊಳ್ಳಲು ಸೂಚನೆ ನೀಡಲಾಗಿತ್ತು. ಆದರೆ, ಕೆಲವೇ ಮಂದಿ ಕಾರ್ಮಿಕರನ್ನು ನಿಯೋಜಿಸಿರುವುದರಿಂದ ಕಾಮಗಾರಿ ವಿಳಂಬವಾಗುತ್ತಿದೆ.  ಇವರುಗಳು ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಆದ್ಯತೆಯ ಮೇಲೆ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

    ಉಕ್ಕಿನ ಸೇತುವೆಯ ನಿರ್ಮಾಣದ ವೆಲ್ಡಿಂಗ್ ಕೆಲಸವನ್ನು ನಿರ್ವಹಿಸಲು ಹೆಚ್ಚಿನ ಕಾರ್ಮಿಕರನ್ನು ನಿಯೋಜಿಸಬೇಕು. ಇದರ ಜೊತೆಯಲ್ಲಿಯೇ ಉಕ್ಕಿನ ಮೇಲ್ಸೇತುವೆಯ ಗರ್ಡಲ್ಸ್ ಅನ್ನು ಹಳಿಯ ಮೇಲ್ಭಾಗದಲ್ಲಿ ಇರಿಸಲು ಅಗತ್ಯವಿರುವ ಎಲ್ಲಾ ರೀತಿಯ ಪೂರಕ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

    Click here

    Click here

    Click here

    Call us

    Call us

    ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಲು ಪ್ರಸ್ತುತ ಬಾಕಿ ಇರುವ ಕಾಮಗಾರಿಯನ್ನು ಮಾಡಲು ಯೋಜನೆಯನ್ನು ರೂಪಿಸಬೇಕು. ಇದಕ್ಕೆ ಅಗತ್ಯವಿರುವ ಎಲ್ಲಾ ಸಲಕರಣೆಗಳನ್ನು ನಿಯೋಜಿಸುವುದು ಸೇರಿದಂತೆ ಮತ್ತಿತರ ಪತ್ರ ವ್ಯವಹಾರವನ್ನು ಕೂಡಲೇ ಮಾಡಬೇಕು ಎಂದು ಸೂಚನೆ ನೀಡಿದರು.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಮಾತನಾಡಿ, ಕಾಮಗಾರಿಯ ವಿಳಂಬದಿಂದಾಗಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಕಿರಿಕಿರಿ ಉಂಟಾಗುವುದರ ಜೊತೆಗೆ ಅನೇಕ ರಸ್ತೆ ಅಪಘಾತಗಳು ಸಹ ಸಂಭವಿಸಿವೆ. ಇದೆಲ್ಲದ್ದಕ್ಕೂ ನಿರ್ಲಕ್ಷ್ಯದ ಕಾಮಗಾರಿ ಕೈಗೊಂಡಿರುವುದೇ ಆಗಿದೆ. ಅಪಘಾತದ ಪ್ರಕರಣಗಳಲ್ಲಿಯೂ ಗುತ್ತಿಗೆದಾರರು, ಅಭಿಯಂತರರುಗಳನ್ನು ಸೇರಿಸಿ, ನಿರ್ಲಕ್ಷ್ಯ ಪ್ರಕರಣವನ್ನು ದಾಖಲಿಸಲಾಗುವುದು ಎಂದರು.

    ಸಭೆಯಲ್ಲಿ ಕೊಂಕಣ ರೈಲ್ವೆಯ ಸೀನೀಯರ್ ಇಂಜಿನಿಯರ್ ಗೋಪಾಲ ಕೃಷ್ಣ, ಶೃಂಗೇರಿ-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026

    ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

    03/07/2026
    Leave A Reply Cancel Reply

    five × four =

    Call us

    Click Here

    Call us

    Call us

    Call us
    Highest Viewed Recently
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.