ಕುಂದಾಪ್ರ ಡಾಟ್ ಕಾಂ ಸುದ್ದಿ.
ಶಂಕರನಾರಾಯಣ: ಇಲ್ಲಿನ ಅಂಪಾರು ಗ್ರಾಮದ ನಿವಾಸಿ ರಾಜು (53) ಅವರು ಮನೆಯ ಒಳಗೆ ಜಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಾರೆ.
ಅವರು ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಮನನೊಂದು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.