Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕ್ರಿಯೇಟಿವ್ ನುಡಿಹಬ್ಬ ಮತ್ತು ವಾರ್ಷಿಕೋತ್ಸವ ಕ್ರಿಯೇಟಿವ್‌ ಆವಿರ್ಭವ
    ಊರ್ಮನೆ ಸಮಾಚಾರ

    ಕ್ರಿಯೇಟಿವ್ ನುಡಿಹಬ್ಬ ಮತ್ತು ವಾರ್ಷಿಕೋತ್ಸವ ಕ್ರಿಯೇಟಿವ್‌ ಆವಿರ್ಭವ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದಲ್ಲಿ ಕ್ರಿಯೇಟಿವ್ ನುಡಿಹಬ್ಬ ಮತ್ತು ವಾರ್ಷಿಕೋತ್ಸವ ಸಮಾರಂಭ ಕ್ರಿಯೇಟಿವ್ ಆವಿರ್ಭವವು “ವಿವಿಧತೆಯಲ್ಲಿ ಏಕತೆ” ಎಂಬ ಪರಿಕಲ್ಪನೆಯೊಂದಿಗೆ ಬಹಳ ವೈಭವಪೂರ್ಣವಾಗಿ ಮೂಡಿಬಂದಿತು.

    Click Here

    Call us

    Click Here

    ಪ್ರೇಮಕವಿ ಎಂದೇ ಕರೆಯಲ್ಪಡುವ ಖ್ಯಾತ ಸಾಹಿತಿಗಳಾದ ಬಿ. ಆರ್. ಲಕ್ಷ್ಮಣರಾವ್ ಹಾಗೂ ನಡೆದಾಡುವ ಗ್ರಂಥಾಲಯ ಎಂದೇ ಪ್ರಸಿದ್ಧರಾದ ಡಾ. ಸೋಮೇಶ್ವರ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು.

    ವಿದ್ಯಾರ್ಥಿಗಳ ಸಮ್ಮುಖದಲ್ಲಿ ಎರಡು ಹಂತಗಳಲ್ಲಿ ಸಂವಾದ ಕಾರ್ಯಕ್ರಮವು ಖ್ಯಾತ ನಿರೂಪಕ ಅವಿನಾಶ್ ಕಾಮತ್ ಅವರ ಮುಖೇನ ನಡೆಸಲ್ಪಟ್ಟಿತು. ” ಕವಿತೆ ಹುಟ್ಟುವ ಸಮಯ “ಸಂವಾದ ಕಾರ್ಯಕ್ರಮದಲ್ಲಿ ಬಿ. ಆರ್. ಲಕ್ಷ್ಮಣರಾವ್ ಅವರು ಸಂವಾದ ನಡೆಸುತ್ತಾ ವಿದ್ಯಾರ್ಥಿ ಸಮೂಹವನ್ನುದ್ದೇಶಿಸಿ ಹಾಡುಗಳ ನಿರಂತರತೆಗೆ ಕಾರಣ ಮುಂದಿನ ಪೀಳಿಗೆಯಾಗಿರುವ ವಿದ್ಯಾರ್ಥಿಗಳು ಎಂದರು. ಮಜಾ ಟಾಕೀಸ್ ಖ್ಯಾತಿಯ ಮೋಹನ್ ಕಾರ್ಕಳ ಮತ್ತು ತಂಡದವರಿಂದ ಬಿ ಆರ್ ಲಕ್ಷ್ಮಣರಾವ್ ವಿರಚಿತ ಕವಿತೆಗಳ ಗಾಯನ ಕಾರ್ಯಕ್ರಮ ಜರುಗಿತು.

    ಪ್ರಖ್ಯಾತ ವೈದ್ಯ, ಕ್ವಿಜ್ ಮಾಸ್ಟರ್, ಲೇಖಕರು ಹಾಗೂ ಅಂಕಣಕಾರರಾದ ಡಾ. ನಾ ಸೋಮೇಶ್ವರ ಅವರು ಸಂವಾದ ಕಾರ್ಯಕ್ರಮದಲ್ಲಿ “ಪುಸ್ತಕ ಪ್ರೀತಿಯಿಂದ ಬದುಕು ಸಂಪ್ರೀತ ” ಎಂಬ ವಿಚಾರದ ಕುರಿತು ಮಾತನಾಡುತ್ತಾ ಮೆದುಳು, ಮನಸ್ಸು ಹಾಗೂ ಆತ್ಮಕ್ಕೆ ಸೂಕ್ತ ವ್ಯಾಯಾಮ ನೀಡುವುದು ಪುಸ್ತಕ ಮಾತ್ರ. ಆದ್ದರಿಂದ ಪಠ್ಯವಾಗಲಿ, ಸಾಹಿತ್ಯವಾಗಲಿ ಪ್ರೀತಿಯಿಟ್ಟು ಓದಿದರೆ ಮಾತ್ರ ಗುರಿ ಮುಟ್ಟಲು ಸುಲಭಸಾಧ್ಯ ಎಂದರು.

    “ವನಿತಾ ಸುಗ್ಗಿ” ಶೀರ್ಷಿಕೆಯಡಿಯಲ್ಲಿ ಕ್ರಿಯೇಟಿವ್ ಪುಸ್ತಕಮನೆ ವತಿಯಿಂದ 5 ಜನ ಲೇಖಕಿಯರ ಪುಸ್ತಕ ಬಿಡುಗಡೆಯಾಯಿತು. ಕ್ರಿಯೇಟಿವ್ ಪುಸ್ತಕ ಮನೆ ಕಾರ್ಕಳ ಹಾಗೂ ಮೂಡುಬಿದಿರೆ ಶಾಖೆಯಲ್ಲಿ “ಪರಸ್ಪರ” ಕಾರ್ಯಕ್ರಮದಲ್ಲಿ ಓದುಗ – ಲೇಖಕ ಜೊತೆಯಾಗುವ, ಪುಸ್ತಕಗಳಿಗೆ ಸಹಿ ಪಡೆಯುವ, ಸೆಲ್ಫಿ ತೆಗೆದುಕೊಳ್ಳುವ ವಿಶೇಷ ಅವಕಾಶವನ್ನು ಕಲ್ಪಿಸಲಾಗಿತ್ತು.

    Click here

    Click here

    Click here

    Click Here

    Call us

    Call us

     ಅಪರಾಹ್ನ 2.30ರಿಂದ 2023-24ನೇ ಶೈಕ್ಷಣಿಕ ಸಾಲಿನ “ಸಾಧಕ ವಿದ್ಯಾರ್ಥಿಗಳಿಗೆ ಪುರಸ್ಕಾರ” ಕಾರ್ಯಕ್ರಮ ನಡೆಯಿತು. ಉದ್ಘಾಟಕರಾಗಿ ಆಗಮಿಸಿದ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿ. ಸುನಿಲ್ ಕುಮಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಕ್ರಿಯೇಟಿವ್ ವಿದ್ಯಾರ್ಥಿಗಳ ಸಾಧನೆಯಿಂದ ಕಾರ್ಕಳ ತಾಲೂಕು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿರುವುದು ಹೆಮ್ಮೆಯ ವಿಚಾರ ಎಂದರು.

    ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಪದವಿಪೂರ್ವ ವಿಭಾಗದ ಉಪನಿರ್ದೇಶಕರಾದ ಮಾರುತಿ ಅವರು ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಪಠ್ಯ, ಪಠ್ಯೇತರ ವಿಭಾಗಗಳಲ್ಲಿ ಮುಂಚೂಣಿಯಲ್ಲಿದ್ದು, ಹೆಸರಿಗೆ ತಕ್ಕಂತೆ ವಿದ್ಯಾರ್ಥಿಗಳನ್ನು ಸೃಜನಾತ್ಮಕವಾಗಿ ಮಾರ್ಪಡಿಸುತ್ತಿರುವ ಸಂಸ್ಥೆ ಇನ್ನ? ಏಳಿಗೆಯನ್ನು ಕಾಣಲಿ ಎಂದು ಶುಭಹಾರೈಸಿದರು.

    2023-24ನೇ ಶೈಕ್ಷಣಿಕ ಸಾಲಿನ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಪ್ರಶಸ್ತಿ ವಿತರಣೆಯು ನಡೆಯಿತು. ಸಹ ಸಂಸ್ಥಾಪಕರಾದ ಡಾ. ಬಿ ಗಣನಾಥ ಶೆಟ್ಟಿ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಂಸ್ಥೆಯ ಸಂಸ್ಥಾಪಕ ವರ್ಗದವರು, ಎಲ್ಲಾ ಬೋಧಕ – ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಪೋ?ಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಜೀವಶಾಸ್ತ್ರ ಉಪನ್ಯಾಸಕ ಲೋಹಿತ್ ಎಸ್ ಕೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

    ಸಂಜೆ 6.30 ರಿಂದ “ವಿವಿಧತೆಯಲ್ಲಿ ಏಕತೆ” ಪರಿಕಲ್ಪನೆಯ ’ಕ್ರಿಯೇಟಿವ್ ಆವಿರ್ಭವ’ ವು ಬಹಳ ಸುಂದರವಾಗಿ ಮೂಡಿಬಂದು ಸಾಂಸ್ಕೃತಿಕ ಕಾರ್ಯಕ್ರಮವು ಸಾವಿರಾರು ಮಂದಿ ಪ್ರೇಕ್ಷಕರ ಮನಸೂರೆಗೊಂಡಿತು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    three + two =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.