ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಈಗಾಗಲೇ ವಿದ್ಯಾರ್ಜನೆ ಮುಗಿಸಿರುವ ಹಳೆಯ ವಿದ್ಯಾರ್ಥಿಗಳಿಗಾಗಿ ಸಮ್ಮಿಲನ ಕಾರ್ಯಕ್ರಮವು ಇತ್ತೀಚಿಗೆ ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದಡಿಯಲ್ಲಿ ಬಾಲಕರಿಗಾಗಿ ಕ್ರಿಕೆಟ್, ಅಂಬಾರಿ ರೇಸ್, ರನ್ನಿಂಗ್ ರೇಸ್ ಹಾಗೂ ಬಾಲಕಿಯರಿಗಾಗಿ ಥ್ರೋ ಬಾಲ್, ಗೋಣಿಚೀಲ ಓಟ, ರಂಗೋಲಿ, ಮೆಹಂದಿ ಬಿಡಿಸುವ ಸ್ಪರ್ಧೆಗಳನ್ನು ನಡೆಸಲಾಯಿತು.
ಸಂಜೆಯ ಅವಧಿಯಲ್ಲಿ ಹಳೆಯ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಅಂತಾರಾಷ್ಟ್ರೀಯ ಮಟ್ಟದ ಜಾದೂಗಾರರಾದ ಸತೀಶ್ ಹೆಮ್ಮಾಡಿ ಸಾರಥ್ಯದ ‘ಭ್ರಮಾಲೋಕ’ ಜಾದೂ ತಂಡದಿಂದ ಮನಮೋಹಕ ಜಾದೂ ಪ್ರದರ್ಶನ ಹಾಗೂ ಕುಂದಾಪುರ ತಾಲ್ಲೂಕಿನ ಖ್ಯಾತ ಸುಗಮ ಸಂಗೀತ ಗಾಯಕರುಗಳಾದ ಡಾ. ಗಣೇಶ್ ಗಂಗೊಳ್ಳಿ ಮತ್ತು ರಾಜೇಶ್ ಶ್ಯಾನುಭಾಗ್ ರಿಂದ ‘ಸಂಗೀತ ರಸಸಂಜೆ ಕಾರ್ಯಕ್ರಮಗಳು ನಡೆಯಲ್ಪಟ್ಟವು.
ಇದೇ ಸಂದರ್ಭದಲ್ಲಿ ಸುರತ್ಕಲ್ ಗೋವಿಂದದಾಸ ಕಾಲೇಜಿನ ಉಪನ್ಯಾಸಕರಾದ ಚವನ್ ಹೆಗ್ಡೆ ಮತ್ತು ತಂಡದವರು ವಿಶಿಷ್ಟ ಟೆಲಿಸ್ಕೊಪ್ ನ ಮೂಲಕ ಆಕಾಶಕಾಯಗಳನ್ನು ದರ್ಶಿಸಿ, ಅವುಗಳ ಸ್ಥಾನ ಮತ್ತು ಪರಿಭ್ರಮಣ, ಸೂರ್ಯ ಮತ್ತು ಚಂದ್ರ ಗ್ರಹಣಗಳ ಕುರಿತಾದ ಮಹತ್ವದ ಮಾಹಿತಿಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.
ವಿವಿಧ ಸ್ಪರ್ಧೆಗಳಲ್ಲಿ ಜಯಶಾಲಿಗಳಾದ ಹಳೆಯ ವಿದ್ಯಾರ್ಥಿಗಳಿಗೆ ಇದೇ ಸಂದರ್ಭದಲ್ಲಿ ಆಕರ್ಷಕ ಬಹುಮಾನಗಳನ್ನು ವಿತರಿಸಿ ಗೌರವಿಸಲಾಯಿತು.
ರಮಾದೇವಿ, ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ, ಆಡಳಿತಾಧಿಕಾರಿ ವೀಣಾ ರಶ್ಮೀ ಎಂ., ಉಪ ಪ್ರಾಂಶುಪಾಲರಾದ ರಾಮದೇವಾಡಿಗ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸುಜಾತ ಸದಾರಾಂ, ಶಿಕ್ಷಕ ಶಿಕ್ಷಕೇತರ ವೃಂದದವರು ಮತ್ತು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.