ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಇಲ್ಲಿನ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿ ಅವರ 9ನೇ ಪುಣ್ಯತಿಥಿ ಆರಾಧನಾ ಮಹೋತ್ಸವ ಕಾರ್ಯಕ್ರಮ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಮಂಗಳವಾರ ನಡೆಯಿತು.
ಬೆಳಿಗ್ಗೆ ಸ್ತೋತ್ರ ಪಠಣ, ಮಧ್ಯಾಹ್ನ ಶ್ರೀದೇವರಿಗೆ ಮಹಾಮಂಗಳಾರತಿ, ಗುರುಪೂಜೆ, ಪುಷ್ಪಾರ್ಚನೆ, ತೀರ್ಥ ಪ್ರಸಾದ ವಿತರಣೆ ನಡೆಯಿತು. ದೇವಸ್ಥಾನದ ತಾಂತ್ರಿಕ ವೇದಮೂರ್ತಿ ಜಿ. ರಾಘವೇಂದ್ರ ಆಚಾರ್ಯ ಮತ್ತು ದೇವಸ್ಥಾನದ ಆಡಳಿತ ಮಂಡಳಿಯ ಡಾ. ಕಾಶೀನಾಥ ಪೈ ಮತ್ತು ಎಂ.ಜಿ. ಪ್ರಕಾಶ ಪೈ ಅವರು ಶ್ರೀಗಳ ಗುರು ಗುಣಗಾನ ಮಾಡಿದರು.
ರಾತ್ರಿ ಭಜನೆ, ಶ್ರೀದೇವರಿಗೆ ಪ್ರಸನ್ನಪೂಜೆ, ಪ್ರಸಾದ ವಿತರಣೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಜಿ.ಮೋಹನದಾಸ ಭಟ್ ನೇತೃತ್ವದಲ್ಲಿ ಧಾರ್ಮಿಕ ಅನುಷ್ಠಾನಗಳು ನಡೆಯಿತು.
ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಪುರೋಹಿತರು, ಅರ್ಚಕರು, ಊರಿನ ಹತ್ತು ಸಮಸ್ತರು, ಸಮಾಜಬಾಂಧವರು ಮತ್ತಿತರರು ಉಪಸ್ಥಿತರಿದ್ದರು.