ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ನಾಗೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಂದಾಪುರದ ಕಡೆಗೆ ಸಾಗುತ್ತಿದ್ದ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇರ್ವರಿಗೆ ಗಂಭೀರ ಗಾಯಗೊಂಡ ಘಟನೆ ಗುರುವಾರ ನಡೆದಿದೆ.
ಕಾರಿನಲ್ಲಿದ್ದ ಇರ್ವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಕೇರಳ ಮೂಲದವರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಬೈಂದೂರು ಪೋಲಿಸರು ಭೇಟಿ ನೀಡಿದರು. ಗಾಯಳುಗಳನ್ನು ಸ್ಥಳೀಯರ ಸಹಾಯದಿಂದ ತಕ್ಷಣ ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಬೈಂದೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.