ಗಂಗೊಳ್ಳಿ: ಅಷ್ಟಪವಿತ್ರ ನಾಗಮಂಡಲೋತ್ಸವದ ಮುಹೂರ್ತ ದರ್ಶನ ಸೇವೆ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಗುಜ್ಜಾಡಿ ಗ್ರಾಮದ ಬೆಣ್ಗೆರೆ ಶ್ರೀ ನಾಗ ದೇವಸ್ಥಾನದಲ್ಲಿ ನಡೆಯಲಿರುವ ಜೀರ್ಣಾಷ್ಟಬಂಧ ಪುರಸ್ಸರ ಪುನ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ಅಷ್ಟಪವಿತ್ರ ನಾಗಮಂಡಲೋತ್ಸವದ ಪೂರ್ವಭಾವಿಯಾಗಿ ಮುಹೂರ್ತ ದರ್ಶನ ಸೇವೆ ದೇವಸ್ಥಾನದಲ್ಲಿ ಇತ್ತೀಚಿಗೆ ನಡೆಯಿತು.

Call us

Click Here

ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಫಲನ್ಯಾಸ ಪೂರ್ವಕ ಗುರುಗಣಪತಿ ಪೂಜೆ, ಸಂಕಲ್ಪ, ಪುಣ್ಯಾಹವಾಚನ, ಅಧಿವಾಸ ಹೋಮ, ಕಲಶಾಭಿಷೇಕ, ಮಹಾಪೂಜೆ ಮೊದಲಾದವುಗಳು ಪುರೋಹಿತರಾದ ರಾಘವೇಂದ್ರ ಅಡಿಗ ನೇತೃತ್ವದಲ್ಲಿ ನಡೆಯಿತು. ನಾಗದೇವರ ಪಾತ್ರಿ ರವಿರಾಜ್ ಭಟ್ ಅಂಪಾರು ಅವರಿಂದ ದರ್ಶನ ಸೇವೆ ನಡೆಯಿತು. ನಾಗಮಂಡಲೋತ್ಸವದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಲಿರುವ ಪ್ರಮುಖರಿಗೆ ಪ್ರಸಾದ ನೀಡಲಾಯಿತು.

ಶ್ರೀ ನಾಗ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಉಮೇಶ ಎಲ್.ಮೇಸ್ತ, ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಗಣಪತಿ ಮೇಸ್ತ, ಗೌರವಾಧ್ಯಕ್ಷ ಸುರೇಶ ಖಾರ್ವಿ, ಕಾರ್ಯದರ್ಶಿ ಶ್ರೀಧರ ಮೇಸ್ತ, ಗುಜ್ಜಾಡಿ ಗ್ರಾಪಂ ಸದಸ್ಯ ಹರೀಶ ಮೇಸ್ತ, ಅಖಿಲ ಕರ್ನಾಟಕ ಚಾರೋಡಿ ಮೇಸ್ತ ಸಮಾಜದ ಅಧ್ಯಕ್ಷ ರಾಮಚಂದ್ರ ಶಿರೂರ್‌ಕರ್, ಬೆಣ್ಗೆರೆ ಶ್ರೀ ಸುಬ್ರಹ್ಮಣ್ಯೇಶ್ವರ ಯುತ್ ಕ್ಲಬ್ ಅಧ್ಯಕ್ಷ ವಿಶ್ವನಾಥ ಮೇಸ್ತ, ಕಾರ್ಯದರ್ಶಿ ರಾಮದಾಸ ಮೇಸ್ತ, ಮಹಿಳ ಮಂಡಳಿ ಅಧ್ಯಕ್ಷೆ ಕುಸುಮಾ ಮೇಸ್ತ, ಮೋಹನ ಖಾರ್ವಿ, ಉಮಾನಾಥ ದೇವಾಡಿಗ ಗಂಗೊಳ್ಳಿ, ಚಾರೋಡಿ ಮೇಸ್ತ ಸಮಾಜ ಬಾಂಧವರು, ವಿವಿಧ ಸಮಾಜದ ಮುಖಂಡರು ಮೊದಲಾದವರು ಉಪಸ್ಥಿತರಿದ್ದರು.

Leave a Reply