ಕ್ರೀಡಾಕೂಟವನ್ನುಯಶಸ್ವಿಗೊಳಿಸಲು ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ: ಜಿಲ್ಲಾಧಿಕಾರಿ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಜಿಲ್ಲೆಯಲ್ಲಿ ಜ. 17 ರಿಂದ 23 ರವರೆಗೆ ಕರ್ನಾಟಕ ಕ್ರೀಡಾಕೂಟವನ್ನು ಸುವ್ಯವಸ್ಥಿತವಾಗಿ ನಡೆಸಲು ರಚಿಸಿರುವ ಸಮಿತಿಯ ಸದಸ್ಯರುಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ, ಕ್ರೀಡಾಕೂಟವನ್ನು ಯಶಸ್ವಿಗೊಳಿಸಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.

Call us

Click Here

ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  ನಡೆದ ಕರ್ನಾಟಕ ಕ್ರೀಡಾಕೂಟ -2025  ಆಯೋಜನೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟದಲ್ಲಿ ಭಾಗವಹಿಸಲು ಆಗಮಿಸುವ ಕ್ರೀಡಾ ಪಟುಗಳಿಗೆ, ತೀರ್ಪುಗಾರರಿಗೆ ಹಾಗೂ ಅಧಿಕಾರಿಗಳಿಗೆ ತಂಗಲು ವಸತಿ ಗೃಹಗಳ ವ್ಯವಸ್ಥೆ, ಊಟೋಪಚಾರ, ಕುಡಿಯುವ ನೀರಿನ ವ್ಯವಸ್ಥೆ, ಕ್ರೀಡಾ ಚಟುವಟಿಕೆ ನಡೆಸಲು ಸುವ್ಯವಸ್ಥಿತ ಮೈದಾನ ಸೇರಿದಂತೆ ಮತ್ತಿತರ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಮಾಡುವುದರ ಜೊತೆಗೆ ಯಾವುದೇ ರೀತಿಯಲ್ಲಿ ಕಿಂಚಿತ್ತೂ ತೊಂದರೆಗಳಾಗದಂತೆ ಉಪ ಸಮಿತಿಯ ಸದಸ್ಯರುಗಳು ಜವಾಬ್ದಾರಿ ವಹಿಸಿ ಕಾರ್ಯನಿರ್ವಹಿಸಬೇಕು ಎಂದರು.

ಜಿಲ್ಲೆಗೆ ಕ್ರೀಡಾ ಕೂಟಕ್ಕೆ ಆಗಮಿಸುವ ಪ್ರತಿಯೊಬ್ಬರೂ ನಮಗೆ ಅತಿಥಿಗಳಿದ್ದಂತೆ. ಅವರ ಸಂಚಾರಕ್ಕೆ ಅನುಗುಣವಾಗಿ ವಾಹನದ ವ್ಯವಸ್ಥೆಗಳನ್ನು ಮಾಡಬೇಕು ಎಂದ ಅವರು, ಮುಂಜಾಗೃತವಾಗಿ ಅವರ ಆರೋಗ್ಯ ಸುಧಾರಣೆಗೆ ಅನುಕೂಲವಾಗುವಂತೆ ಆಂಬುಲೆನ್ಸ್ ವ್ಯವಸ್ಥೆಯನ್ನು, ತಾತ್ಕಾಲಿಕ ಆರೋಗ್ಯ ಕೇಂದ್ರಗಳನ್ನು ಆಟದ ಮೈದಾನದಲ್ಲಿ ತೆರೆಯುವುದರೊಂದಿಗೆ ಸೂಕ್ತ ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದರು.

ಕ್ರೀಡಾಕೂಟದ ಸಮಾರೋಪ ಸಮಾರಂಭವು ಜಿಲ್ಲೆಯಲ್ಲಿ ನಡೆಯಲಿದ್ದು, ವೇದಿಕೆ ಕಾರ್ಯಕ್ರಮಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಕಾರ್ಯಕ್ರಮಕ್ಕೆ ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ, ಸಚಿವರು, ಜನ ಪ್ರತಿನಿಧಿಗಳನ್ನು ಹಾಗೂ ಗಣ್ಯರನ್ನು ಆಹ್ವಾನಿಸಬೇಕು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಹ ಅಚ್ಚುಕಟ್ಟಾಗಿ ಆಯೋಜಿಸಬೇಕು ಎಂದರು.

Click here

Click here

Click here

Click Here

Call us

Call us

ಜಿಲ್ಲೆಯ ಪ್ರವಾಸೋದ್ಯಮ ತಾಣಗಳನ್ನು ಪರಿಚಯಿಸುವ ಆಕರ್ಷಕ ವಿಡಿಯೋ ತುಣುಕುಗಳನ್ನು ವೇದಿಕೆ ಕಾರ್ಯಕ್ರಮದಲ್ಲಿ ಪ್ರದರ್ಶಿಸಬೇಕು ಹಾಗೂ ಮೈದಾನದಲ್ಲಿ ಊಟದ ವ್ಯವಸ್ಥೆ ನಡೆಯುವ ಜಾಗದಲ್ಲಿಯೂ ಸಹ ಇವುಗಳನ್ನು ಪ್ರದರ್ಶಿಸುವುದರಿಂದ ಜಿಲ್ಲೆಗೆ ಪ್ರವಾಸಿಗರನ್ನು ಆಕರ್ಷಿಸಲು ಅನುಕೂಲವಾಗಲಿದೆ ಎಂದರು.

ಸೈಕ್ಲಿಂಗ್ ಸ್ಪರ್ಧೆಯು ಜಿಲ್ಲೆಯಲ್ಲಿ ನಡೆಯುವುದರಿಂದ ಸ್ಪರ್ಧೆಗಳು ನಡೆಯುವ ಸಂದರ್ಭದಲ್ಲಿ ರೇಸ್ ನಡೆಯುವ ಮಾರ್ಗದಲ್ಲಿ ವಾಹನಗಳ ಸಂಚಾರವನ್ನು ನಿರ್ಬಂಧಿಸಿ, ಸುಗಮ ಸೈಕಲಿಂಗ್ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದ ಅವರು, ಕ್ರೀಡಾ ಚಟುವಟಿಕೆ ನಡೆಯುವ ಜಾಗಗಳಲ್ಲಿ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಸಭೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಉದಯ್ ಕುಮಾರ್ ಶೆಟ್ಟಿ, ಮಕ್ಕಳ ವಿಶೇಷ ಪೊಲೀಸ್ ಘಟಕದ ಹಿರಿಯ ಮಕ್ಕಳ ಪೊಲೀಸ್ ಕಲ್ಯಾಣಾಧಿಕಾರಿ ಡಿ.ಟಿ ಪ್ರಭು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply