ಕೊಲ್ಲೂರು ದೇವಳಕ್ಕೆ ಸಚಿವ ಎನ್.ಎಸ್. ಬೋಸರಾಜು ಭೇಟಿ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೊಲ್ಲೂರು:
ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್. ಎಸ್. ಬೋಸರಾಜು ಇಂದು ಭೇಟಿ ನೀಡಿ, ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

Call us

Click Here

ದೇವಳದ ವತಿಯಿಂದ ಸಚಿವರನ್ನು ಗೌರವಿಸಲಾಯಿತು. ಈ ವೇಳೆ ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೆ. ಬಾಬು ಶೆಟ್ಟಿ, ಸದಸ್ಯರಾದ ರಾಜೇಶ ಕಾರಂತ್, ಧನಾಕ್ಷಿ ಪೂಜಾರಿ, ಸುಧಾ ಕೆ. ಮೊಗವೀರ, ದೇವಳದ ಕಾರ್ಯನಿರ್ವಾಣಾಧಿಕಾರಿ ಪ್ರಶಾಂತ್ ಶೆಟ್ಟಿ ಮತ್ತು ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಎಸ್. ರಾಜು ಪೂಜಾರಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅರವಿಂದ ಪೂಜಾರಿ, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಶೆಟ್ಟಿ ಹಾಗೂ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply