ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಗೋಳಿಯಂಗಡಿ ಸಮೀಪದ ಬೆಳ್ವೆ ಗ್ರಾಮದ ಕಾರಿಕೊಡ್ಲು ಕ್ರಾಸ್ ನಲ್ಲಿ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ವ್ಯಕ್ತಿ ಸಾವನ್ನಪ್ಪಿ ಹಾಗೂ ಇನೋರ್ವ ವ್ಯಕ್ತಿ ಗಂಭೀರ ಗಾಯಗೊಂಡಿದ್ದ ಘಟನೆ ಶನಿವಾರ ಸಂಜೆ ನಡೆದಿದೆ. ಮೃತಪಟ್ಟ ವ್ಯಕ್ತಿ ಉದಯ್ ಹಾಗೂ ಗಾಯಗೊಂಡ ವ್ಯಕ್ತಿ ಕೃಷ್ಣ ಎಂದು ಗುರುತಿಸಲಾಗಿದೆ.
ಕಾರಿಕೊಡ್ಲು ಕ್ರಾಸ್ ಹತ್ತಿರ ಸವಾರ ಉದಯ್ ಮತ್ತು ಸಹಸವಾರ ಕೃಷ್ಣ ಅವರು ಬೈಕ್ ನಿಲ್ಲಿಸಿಕೊಂಡು ಮಾತನಾಡುತ್ತಿರುವ ಹೊತ್ತಲ್ಲಿ ಗೋಳಿ ಯಂಗಡಿಯಿಂದ ಕಾಡಿಕೊಡ್ಲು ಕಡೆಗೆ ಸಾಗುತ್ತಿದ್ದ ಅತಿ ವೇಗ ಮತ್ತು ಅಜಾಗರೂಕತೆಯಿಂದ ಡಿಕ್ಕಿ ಹೊಡೆದಿದ್ದು, ಉದಯ್ ಅವರ ತಲೆಗೆ ಗಂಭೀರ ಏಟು ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಸಹಸವಾರ ಕೃಷ್ಣ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಿಪ್ಪರ್‌ನ್ನು ಶಂಕರನಾರಾಯಣ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಡಿಕ್ಕಿ ಹೊಡೆದ ಬಳಿಕ ಟಿಪ್ಪರ್ ನಿಲ್ಲಿಸಿ ಚಾಲಕ ಪರಾರಿಯಾಗಿದ್ದ.
ಟಿಪ್ಪರ್ ಪರಿಶೀಲಿಸಿದಾಗ ಎರಡೂವರೆ ಯೂನಿಟ್ ಮರಳು ಪತ್ತೆಯಾಗಿದೆ. ಎಲ್ಲಿಂದಲೋ ಮರಳು ಕಳವು ಮಾಡಿ ಅಕ್ರಮ ಸಾಗಾಟ ಮಾಡುತ್ತಿರುವುದು ವಿಚಾರಣೆಯಲ್ಲಿ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಶಂಕರ ನಾರಾಯಣ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.