ಸಾಹಿತ್ಯ ಅಥವಾ ಇನ್ಯಾವುದೇ ವಿಚಾರಗಳನ್ನು ಅರ್ಥೈಸಿಕೊಂಡು ಪ್ರಸ್ತುತ ಪಡಿಸಿ: ರವಿಕಿರಣ್

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಸಾಹಿತ್ಯ ಅಥವಾ ಇನ್ಯಾವುದೇ ವಿಚಾರಗಳಿರಲಿ ಅದನ್ನು ಸರಿಯಾಗಿ ಅರ್ಥ ಮಾಡಿಕೊಂಡು ಪ್ರಸ್ತುತ ಪಡಿಸಿದಾಗಲೇ ಅದು ಸೌಂದರ್ಯವನ್ನು ಕಂಡುಕೊಳ್ಳುತ್ತದೆ. ನಿರಂತರ ಅಭ್ಯಾಸ ನಮ್ಮನ್ನು ಪರಿಪೂರ್ಣವಾಗಿಸುತ್ತದೆ ಎಂದು ನ್ಯಾಯವಾದಿ ರವಿಕಿರಣ್ ಮುರುಡೇಶ್ವರ ಅವರು ಅಭಿಪ್ರಾಯಪಟ್ಟರು. 

Call us

Click Here

ಅವರು ಗುಜ್ಜಾಡಿ ನಾಯಕವಾಡಿಯ ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲದ ಸುವರ್ಣ ಸಂಗಮದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿ ಮಾತನಾಡಿದರು.

ಬೋಳಂಬಳ್ಳಿ ಶ್ರೀ ಪದ್ಮಾವತಿ ದೇವಸ್ಥಾನದ ಧರ್ಮದರ್ಶಿಗಳಾದ ಧರ್ಮರಾಜ್ ಜೈನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.  ಅಂತರ್ ಜಿಲ್ಲಾ ಮಟ್ಟದ ಕರೋಕೆ ಟ್ರ್ಯಾಕ್ ಗೀತ ಗಾಯನ ಸ್ಪರ್ಧೆ ಗಾನ ಸಂಭ್ರಮ 2025 ಪ್ರಶಸ್ತಿ ಫಲಕಗಳನ್ನು ಕುಂದಾಪುರದ ಆದರ್ಶ ಆಸ್ಪತ್ರೆಯ ಮೆಡಿಕಲ್ ಡೈರೆಕ್ಟರ್ ಡಾ. ಆದರ್ಶ ಹೆಬ್ಬಾರ್ ಅನಾವರಣಗೊಳಿಸಿದರು. 

ಮಾಜಿ ಸಚಿವ ಪ್ರಮೋದ್ ಮದ್ವರಾಜ್ ಶುಭ ಹಾರೈಸಿದರು. ಪ್ರೆಸ್ಟೀಜ್ ಪ್ಯಾಲೇಸ್ ಮಾಲೀಕ ಸುಭಾಷ್ ಶೆಟ್ಟಿ, ಗಂಗೊಳ್ಳಿಯ ಬಿಲ್ಲವರ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಾಲ ಬಿಲ್ಲವ, ಜಾನಪದ ಕಲಾ ತರಬೇತುದಾರ ರಮೇಶ್ ಕಲ್ಮಾಡಿ, ಡಿಪ್ಲೊಮ್ಯಾಟ್ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕರಾದ ಪ್ರವೀಣ್ ಶೆಟ್ಟಿ, ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲದ ಅಧ್ಯಕ್ಷ ಶ್ರೀಧರ ಎನ್. ಮೊದಲಾದವರು ಉಪಸ್ಥಿತರಿದ್ದರು.

ಉಪಾಧ್ಯಕ್ಷರಾದ ರವಿ ಎನ್. ಜಿ. ಮೇಸ್ತ್ರಿ ಮತ್ತು ಉದಯ ಎನ್. ಕೆ. ಅತಿಥಿಗಳನ್ನು ಸ್ವಾಗತಿಸಿದರು. 

Click here

Click here

Click here

Click Here

Call us

Call us

ಈ ಸಂದರ್ಭದಲ್ಲಿ ವಿವಿಧ ವಲಯದಲ್ಲಿ ಸಾಧನೆ ತೋರಿದ ಸಾಧಕರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಸಂಗಮೇಶ್ವರ ದೇವಸ್ಥಾನದ ಗೌರವಾಧ್ಯಕ್ಷ ರಾಜು ಎನ್. ಪ್ರಸ್ತಾವಿಕ ಮಾತುಗಳಾಡಿದರು. ಮನೋಜ್ ಸನ್ಮಾನಿತರನ್ನು ಪರಿಚಯಿಸಿದರು. ನರೇಂದ್ರ ಎಸ್. ಗಂಗೊಳ್ಳಿ ಮತ್ತು ಸತ್ಯನಾ ಕೊಡೇರಿ ಕಾರ್ಯಕ್ರಮವನ್ನು ನಿರೂಪಿಸಿದರು. ನಾಗರಾಜ ಎನ್. ಡಿ. ಧನ್ಯವಾದ ಸಮರ್ಪಿಸಿದರು.

Leave a Reply