ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2025ರ ಪ್ರಯುಕ್ತ ಕುಂದಾಪುರ ಸಂಚಾರ ಪೋಲಿಸ್ ಠಾಣಾ ವತಿಯಿಂದ ರಸ್ತೆ ಸುರಕ್ಷತೆಯ ಬಗ್ಗೆ ಮಾಹಿತಿ ಕಾರ್ಯಕ್ರಮ ಆಯೋಜಿಸಲಾಯಿತು.
ಕುಂದಾಪರ ಸಂಚಾರ ಪೋಲಿಸ್ ಠಾಣೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಸುರೇಶ್ ಕೆ. ಅವರು ರಸ್ತೆ ಸುರಕ್ಷತೆಯ ಬಗ್ಗೆ ವಿದ್ಯಾರ್ಥಿಗಳು ಕೈಗೊಳ್ಳಬೇಕಾದ ಮುಂಜಾಗ್ರತೆ ಕುರಿತು ಮಾಹಿತಿ ನೀಡಿದರು.
ಮುಖ್ಯ ಶಿಕ್ಷಕ ಕೃಷ್ಣ ಅಡಿಗ ಅವರು ಸರ್ವರನ್ನು ಸ್ವಾಗತಿಸಿ, ವಂದನಾರ್ಪಣೆ ಗೈದರು. ಈ ಸಮಾರಂಭದಲ್ಲಿ ಸಹಾಯಕ ಸಬ್ ಇನ್ಸ್ಪೆಕ್ಟರ್ ರಾದ ನರೇಶ್ ಹಾಗೂ ನಾಗಪ್ಪ ಅವರು ಉಪಸ್ಥಿತರಿದ್ದರು.