ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಬೆಂಗಳೂರಿನಲ್ಲಿ ನಡೆದ 20ನೇ ರಾಷ್ಟ್ರ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ನಮೃತಾ ಎಸ್. ಪೂಜಾರಿ ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ.
ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 3ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ನಮೃತಾ ಎಸ್. ಪೂಜಾರಿ, ಗಂಗೊಳ್ಳಿಯ ಸುರೇಶ ಪೂಜಾರಿ ಹಾಗೂ ಜ್ಯೋತಿ ದಂಪತಿ ಪುತ್ರ.
ಈಕೆಗೆ ಶಿಕ್ಷಕಿ ಸುನೀತಾ ಅವರು ತರಬೇತಿ ನೀಡಿದ್ದರು.