ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶ್ರೀ ವೆಂಕಟರಮಣ ದೇವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಕುಂದಾಪುರ ವತಿಯಿಂದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದ 2024-25ರ ರಕ್ಷಕ – ಶಿಕ್ಷಕ ಸಭೆಯ ಆಯೋಜಿಸಲಾಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿ ಡಾ. ಎ. ವಿ. ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯ ಆಪ್ತ ಸಮಾಲೋಚಕಿ ವಿದ್ಯಾಶ್ರೀ ನಾಗರಾಜ್ ಅವರು ಮಾತನಾಡಿ, ಇವರು ನಮ್ಮ ಮಕ್ಕಳೇ ನಮ್ಮ ಅಮೂಲ್ಯವಾದ ಆಸ್ತಿ. ನಮ್ಮನ್ನು ಬಿಂಬಿಸುವ ಅವರನ್ನು ಬಾಲ್ಯದಿಂದಲೇ ತಿದ್ದುತ್ತಾ, ಸನ್ಮಾರ್ಗದಲ್ಲಿ ನಡೆಸುವಂತೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿಎಂದು ತಿಳಿಸಿದರು.
ಸಭೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಪ್ರೌಢ ವಿಭಾಗದ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿಯಾದ ರೇಷ್ಮಾ ಡಿಸೋಜ ಅವರು ಉಪಸ್ಥಿತರಿದ್ದರು.
ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿಸೋಜ ಸರ್ವರನ್ನು ಸ್ವಾಗತಿಸಿದರು. ಶಿಕ್ಷಕಿಯರಾದ ಪದ್ಮಾ ಅವರು ವಂದನಾರ್ಪಣೆ ಗೈದರು ರೂಪಾ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.