ಹಟ್ಟಿಯಂಗಡಿ ವಸತಿ ಶಾಲೆಯಲ್ಲಿ ಬಹುಮಾನ ವಿತರಣಾ ಸಮಾರಂಭ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ವಾರ್ಷಿಕೋತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳ ಬಹುಮಾನ ವಿತರಣಾ ಕಾರ್ಯಕ್ರಮವು ಇತ್ತೀಚಿಗೆ ಜರುಗಿತು.

Call us

Click Here

ಈ ಕಾರ್ಯಕ್ರಮಕ್ಕೆ ಕುಂದಾಪುರದ ವಕೀಲರಾದ ಟಿ. ಬಾಲಚಂದ್ರ ಶೆಟ್ಟಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಿ, ಈ ಸಂಸ್ಥೆಯಲ್ಲಿನ ವಿದ್ಯಾರ್ಥಿಗಳ ಶಿಸ್ತು ಮತ್ತು ಸಾಧನೆಯನ್ನು ನೋಡಿದಾಗ ದೇಶದ ಭವಿಷ್ಯದ ಬಗ್ಗೆ ಆಶಾಭಾವನೆ ಮೂಡುತ್ತಿದೆ. ದೇಶದ ಭವಿಷ್ಯವು ಶಿಸ್ತನ್ನು ಅವಲಂಬಿಸಿರುತ್ತದೆ. ಎಲ್ಲಾ ವಿದ್ಯಾಸಂಸ್ಥೆಗಳೂ ಈ ಮಾದರಿಯ ಶಿಸ್ತನ್ನು ತಮ್ಮೆಲ್ಲ ಕಾರ್ಯಚಟುವಟಿಕೆಗಳಲ್ಲಿ ಅಳವಡಿಸಿಕೊಂಡರೆ ದೇಶದ ಭವಿಷ್ಯ ಉಜ್ವಲಗೊಳ್ಳಲಿದೆ. ಯೋಗ, ಧ್ಯಾನ ಮತ್ತು ವ್ಯಾಯಾಮಗಳು ಮನಸ್ಸನ್ನು ಪ್ರಫುಲ್ಲಗೊಳಿಸುತ್ತವೆ. ರೋಗಗಳಿಂದ ನಮ್ಮನ್ನು ದೂರ ಉಳಿಸುತ್ತವೆ. ಎಷ್ಟೇ ಯೋಗ್ಯತೆ ಇದ್ದರೂ ಉತ್ತಮ ಆರೋಗ್ಯ ಹೊಂದಿಲ್ಲ್ಲದಿದ್ದರೆ ಬದುಕು ನಿರರ್ಥಕವಾಗುತ್ತದೆ. ದೇಶದ ಭಾವಿ ಪ್ರಜೆಗಳು ದೇಶ ಮತ್ತು ಜಗತ್ತಿನ ಬಗ್ಗೆ ಚಿಂತನೆ ನಡೆಸುತ್ತಾ, ಒಳಿತು ಕೆಡುಕುಗಳನ್ನು ಗುರುತಿಸುತ್ತಾ ದೇಶವನ್ನು ಉತ್ತಮ ಪ್ರಜಾಸತ್ತಾತ್ಮಕ ದೇಶವನ್ನಾಗಿ ರೂಪಿಸಬೇಕು ಎಂದು ಕರೆ ಕೊಟ್ಟರು.

ಇನ್ನೊರ್ವ ಮುಖ್ಯ ಅತಿಥಿಗಳ ನೆಲೆಯಲ್ಲಿ ಉಪಸ್ಥಿತರಿದ್ದ ಭಾರತೀಯ ಜೀವವಿಮಾ ನಿಗಮ, ಕುಂದಾಪುರ ಘಟಕದ ಚೇರ್ಮೆನ್ಸ್ ಕ್ಲಬ್‌ನ ಸದಸ್ಯರಾದ ಎ. ಶಂಕರ ಐತಾಳರು ಮಾತನಾಡುತ್ತಾ ಇಲ್ಲಿನ ವಿದ್ಯಾರ್ಥಿಗಳು ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಲವಲವಿಕೆಯಿಂದ ಭಾಗವಹಿಸುತ್ತಿರುವುದು ಹೆಮ್ಮೆಯ ಸಂಗತಿ. ಸ್ವಾವಲಂಬಿಯಾಗಿ ಬದುಕಲು ಮಕ್ಕಳು ಎಳವೆಯಿಂದಲೇ ಪ್ರಯತ್ನಿಸಬೇಕು. ಸ್ಪರ್ಧೆಗಳಲ್ಲಿ ಪ್ರಶಸ್ತಿಗಳನ್ನು ಮಾತ್ರ ಪಡೆಯದೇ ಅವುಗಳ ಮೂಲಕ ಬದುಕಿಗೆ ಅವಶ್ಯಕವಾದ ಸತ್ಯ, ಶಿಸ್ತು, ಪ್ರಾಮಾಣಿಕತೆ, ನಾಯಕತ್ವ, ಹೊಂದಾಣಿಕೆ ಇವೇ ಮೊದಲಾದ ಮೌಲ್ಯಗಳನ್ನು ಪಡೆದುಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿಕೊಟ್ಟರು.

ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಮತ್ತು ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲರೂ ಆದ ಶರಣ ಕುಮಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಆಡಳಿತಾಧಿಕಾರಿ ವೀಣಾ ರಶ್ಮೀ ಎಂ., ಉಪಪ್ರಾಂಶುಪಾಲರಾದ ರಾಮ ದೇವಾಡಿಗ, ಸರ್ವ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಎಐಸಿಎಸ್ ಮಟ್ಟದ ಕಬಡ್ಡಿ, ಬ್ಯಾಡ್ಮಿಂಟನ್, ಅಥ್ಲೇಟಿಕ್ ಪಂದ್ಯಾವಳಿಯ ವಿಜೇತರಿಗೆ, ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಯವರು ಆಯೋಜಿಸಿದ್ದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರಿಗೆ ಮತ್ತು ಭಾರತೀಯ ಸಂಸ್ಕೃತಿ ಪ್ರತಿಷ್ಠಾನದವರು ನಡೆಸುವ ಮಹಾಭಾರತ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಗಳಿಗೆ ಇದೇ ಸಂದರ್ಭದಲ್ಲಿ ಪದಕ ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು. ಶಿಕ್ಷಕಿಯರಾದ ಅಶ್ವಿನಿ, ಪ್ರತೀಕ್ಷಾ, ರಂಜಿತಾ, ಪೂರ್ಣಿಮಾ ಹಾಗೂ ಸಂಗೀತಾ ಬಹುಮಾನಿತ ವಿದ್ಯಾರ್ಥಿಗಳ ಪಟ್ಟಿಯನ್ನು ವಾಚಿಸಿದರು. ವಿದ್ಯಾರ್ಥಿನಿ ಅರುಣಾ ಕಾರ್ಯಕ್ರಮಕ್ಕೆ ಎಲ್ಲರನ್ನು ಸ್ವಾಗತಿಸಿದರು. ವಿದ್ಯಾರ್ಥಿ ಮಯೂರ ಎಸ್. ಕೆ. ವಂದಿಸಿದರು. ವಿದ್ಯಾರ್ಥಿನಿ   ಜಾನ್ವಿ ವಿ ಎಚ್. ಕಾರ್ಯಕ್ರಮ ನಿರೂಪಿಸಿದರು.

Click here

Click here

Click here

Click Here

Call us

Call us

Leave a Reply