ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಮಕ್ಕಳಗೆ ಪ್ರೀತಿ ಕೊಟ್ಟರೆ ಸಾಲದು. ಸಂಸ್ಜಾರ ಸಂಸ್ಕೃತಿ ನೀಡಬೇಕು. ಪೋಷಕರಿಂದ ಸಾಧ್ಯವಾಗದ್ದನ್ಬು ಸಾಂಸ್ಕೃತಿಕ ಸಂಸ್ಥೆಗಳು ಕಲಿಸುತ್ತದೆ. ಅಂತಹ ವಾತಾವರಣಕ್ಕೆ ತೆರೆದುಕೊಳ್ಳಲು ಅವಕಾಶ ಮಾಡಿಕೊಡಬೇಕಿದೆ ಎಂದು ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು.
ಅವರು ಸಮಷ್ಟಿ ಪ್ರತಿಷ್ಠಾನ ರಿ. ಹಾಗೂ ಸ್ನೇಹ ತರಂಗ ಬೈಂದೂರು ಸಹಯೋಗದೊಂದಿಗೆ ಸುರಭಿ ರಿ. ಬೈಂದೂರು ಸಂಸ್ಥೆಯ ರಜತಯಾನ ತಿಂಗಳ ತಿರುಳು ಕಾರ್ಯಕ್ರಮದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಶಾರದಾ ವೇದಿಕೆಯಲ್ಲಿ ಹಮ್ಮಿಕೊಂಡ ೩ ದಿನಗಳ ಯಕ್ಷ – ಗೊಂಬೆ ವೈಭವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ ಉಡುಪಿ ಜಿಲ್ಲೆಯ ಕೊನೆಯ ತಾಲೂಕು ಬೈಂದೂರಿಗೆ ಕಲಾಮಾತೆ ಒಲಿದಿದ್ದಾಳೆ. ವರ್ಷಪೂರ್ತಿ ಹತ್ತಾರು ಸಾಂಸ್ಕೃತಿಕ ಚಟುವಟಿಕೆಗಳು ಇಲ್ಲಿ ನಡೆಯುತ್ತದೆ. ಶ್ರದ್ಧೆಯಿಂದ ಮಾಡುವ ಕಾರ್ಯಕ್ಕೆ ಭಗವಂತನ ಆಶೀರ್ವಾದ ಇದ್ದೇ ಇರುತ್ತದೆ ಎಂದರು.
ನಿವೃತ್ತ ಬ್ಯಾಂಕ್ ಅಧಿಕಾರಿ ಗೋವಿಂದ ಎಂ. ಅಧ್ಯಕ್ಷತೆ ವಹಿಸಿದ್ದರು. ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರ, ಮಾಹೆ ಉಡುಪಿಯ ಆಡಳಿತಾಧಿಕಾರಿ ಡಾ. ಬಿ. ಜಗದೀಶ ಶೆಟ್ಟಿ, ರಾಜ್ಯ ಜಾನಪದ ಪರಿಷತ್ ಬೈಂದೂರು ತಾಲೂಕು ಅಧ್ಯಕ್ಷ ಗಿರೀಶ್ ಬೈಂದೂರು, ಉದ್ಯಮಿ ಶ್ರೀಗಣೇಶ್ ಗಾಣಿಗ ಉಪ್ಪುಂದ, ಸಂಚಲನ ಹೊಸೂರು ಅಧ್ಯಕ್ಷ ನಾರಾಯಣ ಮರಾಠಿ, ಇನ್ನರ್ವೀಲ್ ಕ್ಲಬ್ ಕಾರ್ಯದರ್ಶಿ ಚೈತ್ರಾ ಯಡ್ತರೆ, ಸಮಷ್ಟಿ ಪ್ರತಿಷ್ಠಾನದ ಮ್ಯಾಜೇಜಿಂಗ್ ಟ್ರಸ್ಟೀ ಸುನಿಲ್ ಹೆಚ್. ಜಿ. ಉಪಸ್ಥಿತರಿದ್ದರು.
ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಸುರಭಿ ಬೈಂದೂರು ಅಧ್ಯಕ್ಷ ಆನಂದ ಮದ್ದೋಡಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಸುರಭಿ ನಿರ್ದೇಶಕ ಸುಧಾಕರ ಪಿ. ಬೈಂದೂರು ಅತಿಥಿಗಳನ್ನು ಪರಿಚಯಿಸಿದರು. ಉಪಾಧ್ಯಕ್ಷ ಲಕ್ಷ್ಮಣ ಕೊರಗ ಯಡ್ತರೆ ಸ್ವಾಗತಿಸಿ ಕಾರ್ಯದರ್ಶಿ ರಾಮಕೃಷ್ಣ ದೇವಾಡಿಗ ವಂದಿಸಿದರು. ಸದಸ್ಯ ಮಂಜುನಾಥ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಯಕ್ಷಗಾನ ಕೇಂದ್ರ ಇಂದ್ರಾಳಿ ಅವರಿಂದ ಜಟಾಯು ಮೋಕ್ಷ ಯಕ್ಷಗಾನ ಪ್ರದರ್ಶನ, ಸುರಭಿ ವಿದ್ಯಾರ್ಥಿಗಳಿಂದ ನೃತ್ಯ ವೈಭವ ಜರುಗಿತು.















