Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಾವು ಮಾಡುವ ಕೆಲಸದಲ್ಲಿ ಶ್ರದ್ಧೆ, ಪ್ರೀತಿ, ಶಿಸ್ತು ಇರಬೇಕು: ಮಹಾಬಲೇಶ್ವರ ಐತಾಳ್
    ಗಂಗೊಳ್ಳಿ

    ನಾವು ಮಾಡುವ ಕೆಲಸದಲ್ಲಿ ಶ್ರದ್ಧೆ, ಪ್ರೀತಿ, ಶಿಸ್ತು ಇರಬೇಕು: ಮಹಾಬಲೇಶ್ವರ ಐತಾಳ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗಂಗೊಳ್ಳಿ:
    ನಾವು ಮಾಡುವ ಕೆಲಸದಲ್ಲಿ ಶ್ರದ್ಧೆ, ಪ್ರೀತಿ, ಶಿಸ್ತು ಇರಬೇಕು. ರಾಮಾಯಣ, ಮಹಾಭಾರತ ಹಾಗೂ ಪುರಾಣ ಮತ್ತು ಗ್ರಂಥಗಳಲ್ಲಿ ಅಡಕವಾಗಿ ಅನೇಕ ವಿಷಯಗಳು ಇಂದಿನ ಮಕ್ಕಳಿಗೆ ತಿಳಿದಿಲ್ಲ. ಪಠ್ಯ ಪುಸ್ತಕದಲ್ಲಿ ಇರುವ ವಿಷಯಗಳನ್ನು ಮಾತ್ರ ಮಕ್ಕಳಿಗೆ ಹೇಳಲಾಗುತ್ತಿದೆ. ಇದರಿಂದ ನಮ್ಮ ಇತಿಹಾಸ ನಮ್ಮ ಮಕ್ಕಳಿಗೆ ತಿಳಿಯುತ್ತಿಲ್ಲ. ಹೀಗಾಗಿ ಪುರಾಣಗಳನ್ನು, ಧಾರ್ಮಿಕ ಗ್ರಂಥಗಳನ್ನು ಪಠಣ ಮಾಡಬೇಕು. ಮುಂದಿನ ಪೀಳಿಗೆಗೆ ದಾರಿದೀಪವಾಗಬೇಕು ಎಂದು ಮಹಾಬಲೇಶ್ವರ ಐತಾಳ್ ಉಪ್ಪುಂದ ಹೇಳಿದರು.

    Click Here

    Call us

    Click Here

    ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಗಂಗೊಳ್ಳಿ ಆಶ್ರಯದಲ್ಲಿ ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ ಸಹಯೋಗದೊಂದಿಗೆ ಗಂಗೊಳ್ಳಿಯ ಎಸ್.ವಿ. ಹಿರಿಯ ಪ್ರಾಥಮಿಕ ಶಾಲೆಯ ಟಿ. ವಿಮಲಾ ವಿ.ಪೈ ಸಭಾಂಗಣದಲ್ಲಿ ಶನಿವಾರ ಜರಗಿದ ಅಜಿತ್ ಕುಮಾರ ಅವರ ಪುಣ್ಯತಿಥಿ ’ಸೇವಾ ದಿನಾಚರಣೆ’ ಕಾರ್ಯಕ್ರಮದಲ್ಲಿ ಬೌದ್ಧಿಕ್ ನೀಡಿ ಅವರು ಮಾತನಾಡಿದರು.

    ನಮ್ಮ ದೇಶದಲ್ಲಿ ಯುವ ಜನರ ಶಕ್ತಿ ಅಪವ್ಯಯವಾಗುತ್ತಿದೆ ಎಂಬುದನ್ನ ಮನಗಂಡ ಅಜಿತ್ ಕುಮಾರ್‌ರು 1981 ಸೇವಾ ಪ್ರವೃತಿ ಘಟಕವನ್ನು ಸ್ಥಾಪಿಸಿ ಸೇವಾವೃತಿಗಳ ಮೂಲಕ ನಮ್ಮ ಸಂಸ್ಕೃತಿ, ಸಂಸ್ಕಾರಗಳನ್ನು ಮಕ್ಕಳಲ್ಲಿ ಭಿತ್ತರಿಸುವ ಕಾರ್ಯಕ್ರಮ ಪ್ರಾರಂಭಿಸಿದರು. ಶಿಶು ಮಂದಿರ ಸ್ಥಾಪಿಸಿ ಮಕ್ಕಳಿಗೆ ಸನಾತನ ಹಿಂದು ಸಂಸ್ಕೃತಿ, ಸಂಸ್ಕಾರದ ಶಿಕ್ಷಣ ನೀಡಲಾಗುತ್ತಿದೆ.  ಮಕ್ಕಳ ಜೊತೆಗೆ ಮಕ್ಕಳ ಪೋಷಕರಿಗೆ ಶಿಕ್ಷಣ ನೀಡುವುದು ಶಿಶು ಮಂದಿರದ ಉದ್ದೇಶ. ಶಿಶು ಮಂದಿರದಲ್ಲಿ ನೀಡಿದ ಶಿಕ್ಷಣ ಮನೆಯಲ್ಲಿ ಕಾರ್ಯಗತವಾಗಬೇಕು ಎಂದರು.

    ಬಿಲ್ಲವರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಗೋಪಾಲ ಬಿಲ್ಲವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭ ಸಮಾಜ ಸೇವಕ, ದಾನಿ ಆನಂದ ಬಿಲ್ಲವ ಅವರನ್ನು ಗೌರವಿಸಲಾಯಿತು. ಬಿಲ್ಲವರ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಾಲ ಪೂಜಾರಿ, ಬಿಲ್ಲವರ ಹಿತರಕ್ಷಣಾ ವೇದಿಕೆ ಕಾರ್ಯದರ್ಶಿ ಜಿ. ಆರ್. ಲಕ್ಷ್ಮಣ ಪೂಜಾರಿ, ಮಾತಾಜಿ ಪ್ರೇಮಾ ಮತ್ತು ರತ್ನ ಉಪಸ್ಥಿತರಿದ್ದರು.

    ಶಿಶು ಮಂದಿರದ ಅಧ್ಯಕ್ಷ ಬಿ.ರಾಘವೇಂದ್ರ ಪೈ ಸ್ವಾಗತಿಸಿದರು. ಸಂಚಾಲಕ ಡಾ. ಕಾಶೀನಾಥ ಪೈ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಶು ಮಂದಿರದ ಸದಸ್ಯರಾದ ಭಾಸ್ಕರ ಎಚ್. ಜಿ., ಸವಿತಾ ಯು.ದೇವಾಡಿಗ, ಬಿ. ಲಕ್ಷ್ಮೀಕಾಂತ ಮಡಿವಾಳ, ವಿಜಯಶ್ರೀ ವಿ. ಆಚಾರ್ಯ, ವಸಂತಿ ಖಾರ್ವಿ ಅತಿಥಿಗಳನ್ನು ಗೌರವಿಸಿದರು. ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಕಾರ್ಯಕ್ರಮ ನಿರ್ವಹಿಸಿದರು. ಶಿಶು ಮಂದಿರದ ಕಾರ್ಯದರ್ಶಿ ಅಶ್ವಿತಾ ಜಿ. ಪೈ ವಂದಿಸಿದರು.

    Click here

    Click here

    Click here

    Click Here

    Call us

    Call us

    Gangolli
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ: ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಕಾರ್ಯಕ್ರಮ

    21/04/2026

    ಗಂಗೊಳ್ಳಿ: ಅಂಗನವಾಡಿ ಮಕ್ಕಳ ಹಬ್ಬ ಹಾಗೂ ಪ್ರತಿಭಾ ಪುರಸ್ಕಾರ

    20/04/2026

    ಗಂಗೊಳ್ಳಿ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದ ಅರ್ಚಕ ಬಾಬಣ್ಣ ಭಟ್‌ ನಿಧನ

    15/04/2026
    Leave A Reply Cancel Reply

    10 + sixteen =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.