ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸಾಲಿಗ್ರಾಮ ಸಮೀಪದ ಕೋಡಿ ಕನ್ಯಾಣ ಸಮುದ್ರ ಕಿನಾರೆಯಲ್ಲಿ ಸುಮಾರು 35-45 ವರ್ಷದ ಅಪರಿಚಿತ ಮಹಿಳೆಯ ಶವವು ಕೊಳೆತೆ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಅಪರಿಚಿತ ಮಹಿಳೆಯ ಶವವು ಕೊಳೆತ ರೀತಿಯಲ್ಲಿ ತೇಲುತ್ತಿರುವುದನ್ನು ನೋಡಿ ಸ್ಥಳೀಯರು, ಕೂಡಲೇ ಕೋಟ ಪೊಲೀಸ್ ಠಾಣೆಗೆ ಕರೆ ಮಾಡಿ ತಿಳಿಸಿರುತ್ತಾರೆ. ಪೊಲೀಸ್ ಉಪನಿರೀಕ್ಷಕರಾದ ರಾಘವೇಂದ್ರ ಸಿ. ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ.
ಮೃತದೇಹವು ಬೇರೆ ಕಡೆಯ ನೀರಿನಲ್ಲಿ ಅಥವಾ ಸಮುದ್ರದಲ್ಲಿ ಬಿದ್ದು ಮೃತಪಟ್ಟು ತೇಲಿ ಬಂದಿರುವ ಬಗ್ಗೆ ಸಂಶಯಿಸಲಾಗಿದೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.









