ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಈಗಿನ ಔದ್ಯೋಗಿಕ ಪ್ರಪಂಚದಲ್ಲಿ ವಿದ್ಯಾರ್ಥಿಗಳು ಪ್ರೌಢ ಶಿಕ್ಷಣದಿಂದಲೇ ವೃತ್ತಿಯ ಬಗ್ಗೆ ಮಾರ್ಗದರ್ಶನ ಪಡೆದು ನಿಖರ ಗುರಿಯೆಡೆ ತಲುಪುವಲ್ಲಿ ಈ ಕಾರ್ಯಕ್ರಮ ಸಹಕರಿಯಾಗಲಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕುಂದಾಪುರದ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಎಸ್. ಶೆಟ್ಟಿ ಹೇಳಿದರು.
ಅವರು ಕರ್ನಾಟಕ ಸರಕಾರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕರ್ನಾಟಕ ಕೌಶಭಿವೃದ್ಧಿ ನಿಗಮ, ಸಮಗ್ರ ಶಿಕ್ಷಣ ಕರ್ನಾಟಕ ಮತ್ತು ಅನಹತ ಯುನೈಟೆಡ್ ಎಫರ್ಟ್ಸ್ ಬೆಂಗಳೂರು ಇವರ ಸಹಯೋಗದಲ್ಲಿ ರಾಜ್ಯದ 150 ಶಾಲೆಗಳಲ್ಲಿ ಅನುಷ್ಠಾನಗೊಂಡಿರುವ “ನನ್ನ ವೃತ್ತಿ ನನ್ನ ಆಯ್ಕೆ” ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಬಿ.ಜಿ., ಪ್ರಭಾರ ಉಪ ಪ್ರಾಂಶುಪಾಲರಾದ ವಿನುತಾ ಗಾಂವಕರ್, ಜಿಲ್ಲಾ ನೋಡಲ್ ಪ್ರಸನ್ನ ಕುಮಾರ್, ನನ್ನ ವೃತ್ತಿ ನನ್ನ ಆಯ್ಕೆ ಮಾರ್ಗದರ್ಶಕ ಶಿಕ್ಷಕರಾದ ಅರುಣ್ ಶೆಟ್ಟಿ ಉಳ್ತೂರು, ಸ್ಪೂರ್ತಿ ಆಚಾರ್ಯ ಉಪಸ್ಥಿತರಿದ್ದರು.










