ಗಂಗೊಳ್ಳಿ: ಲಂಚಕ್ಕೆ ಬೇಡಿಕೆ ಇರಿಸಿದ ಪಿಡಿಓ, ಲೆಕ್ಕ ಸಹಾಯಕ ಲೋಕಾಯುಕ್ತರ ವಶಕ್ಕೆ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ ಇರಿಸಿದ ಗಂಗೊಳ್ಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮಾಶಂಕರ್ ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಶೇಕರ ಬಿ. ಅವರನ್ನು ರೆಡ್ ಹ್ಯಾಂಡ್ ಆಗಿ ಉಡುಪಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

Call us

Click Here

9/11 ಮಾಡಿ ಕೊಡಲು 22 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟ ಬಗ್ಗೆ ದೂರುದಾರರು ನೀಡಿದ ದೂರಿನಂತೆ ಈ ಕಾರ್ಯಾಚರಣೆ ನಡೆಸಲಾಗಿದೆ.

ಲೋಕಾಯುಕ್ತ ಅಧೀಕ್ಷಕ ನಟರಾಜ್ ಅವರ ಮಾರ್ಗದರ್ಶನದಲ್ಲಿ ಪ್ರಭಾರ ಪೊಲೀಸ್ ಉಪಾಧೀಕ್ಷಕ ಮಂಜುನಾಥ್ ನೇತೃತ್ವದಲ್ಲಿ ಇನ್ಸ್‌ಪೆಕ್ಟ‌ರ್ ಅಮನುಲ್ಲ ಹಾಗೂ ಚಂದ್ರಶೇಖ‌ರ್, ಸಿಬ್ಬಂದಿಗಳಾದ ನಾಗೇಶ್ ಉಡುಪ, ನಾಗರಾಜ್, ರೋಹಿತ್, ಪುಷ್ಪಲತಾ, ಮಲ್ಲಿಕಾ, ಅಬ್ದುಲ್ ಜಲಾಲ್, ಸತೀಶ್ ಹಂದಾಡಿ, ರವೀಂದ್ರ ಗಾಣಿಗ, ಪ್ರಸನ್ನ ದೇವಾಡಿಗ, ರಮೇಶ್, ಸತೀಶ್ ಆಚಾರ್ಯ, ರಾಘವೇಂದ್ರ ಹೊಸಕೋಟೆ, ಸೂರಜ್ ಕಾಪು, ಸುಧೀರ್ ಹಾಗೂ ಮಂಗಳೂರು ಲೋಕಾಯುಕ್ತ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Leave a Reply