ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ನಾಟಕ ಮಾಧ್ಯಮದಿಂದ ಮಕ್ಕಳಿಗೆ ಇತಿಹಾಸ ಅರಿಯಲು ಸುಲಭ. ನಾಟಕಗಳು ರಂಜನೆಯ ಜೊತೆಗೆ ಚಿಂತನೆಯನ್ನು ಹಚ್ಚುತ್ತದೆ ಎಂದು ಲಯನ್ಸ್ ಕ್ಲಬ್ ಬೈಂದೂರು ಉಪ್ಪುಂದ ಇದರ ಅಧ್ಯಕ್ಷರಾದ ಸತೀಶ್ ಶೆಟ್ಟಿ ಅವರು ಹೇಳಿದರು.

ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೈಂದೂರಿನಲ್ಲಿ ರೋಟರಿ ಕ್ಲಬ್ ಬೈಂದೂರು, ಲಯನ್ಸ್ ಕ್ಲಬ್ ಬೈಂದೂರು – ಉಪ್ಪುಂದ, ಸೀನಿಯರ್ ಚೇಂಬರ್ ಬೈಂದೂರು ಇವರ ಸಹಯೋಗದಲ್ಲಿ ನಿರ್ದಿಗಂತ ಮೈಸೂರು ತಂಡದ ನಾಟಕ ತಿಂಡಿಗೆ ಬಂದ ತುಂಡೇರಾಯ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಭಾಸ್ಕರ್ ದೇವಾಡಿಗ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರಾದ ವೆಂಕಟರಮಣ ದೇವಾಡಿಗ ಮತ್ತು ದಯಾನಂದ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ನಾಟಕ ತಂಡದ ನಿರ್ವಾಹಕರಾದ ಗಣೇಶ್ ಅವರನ್ನು ಗೌರವಿಸಲಾಯಿತು. ನೀನಾಸಂ ಪದವೀಧರ ಸತ್ಯನ್ ಕೊಡೇರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಬೈಂದೂರು ರೋಟರಿ ಕ್ಲಬ್‌ನ ಕಾರ್ಯದರ್ಶಿ ಸುನಿಲ್ ಹೆಚ್. ಜಿ ಸ್ವಾಗತಿಸಿ, ಶಾಲಾ ಪದವೀಧರ ಮುಖ್ಯೋಪಾಧ್ಯಾಯ ಜನಾರ್ದನ ದೇವಾಡಿಗ ಧನ್ಯವಾದ ಸಲ್ಲಿಸಿದರು. ಶಿಕ್ಷಕ ಗಣಪತಿ ಹೋಬಳಿದಾರ್ ಕಾರ್ಯಕ್ರಮ ಸಂಯೋಜಿಸಿದ್ದರು.