ಕಂಚಿಕಾನು ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಅಂಬರ ವಿಹಾರ ಆಕಾಶ ಕಾಯಗಳ ವೀಕ್ಷಣೆ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು:
ಇಕೋ ಕ್ಲಬ್ ಕಾರ್ಯಕ್ರಮದಡಿಯಲ್ಲಿ ‘ಅಂಬರ ವಿಹಾರ’ ಆಕಾಶ ಕಾಯಗಳ ವೀಕ್ಷಣೆ ಕಾರ್ಯಕ್ರಮವು ಕಂಚಿಕಾನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿತು.

Call us

Click Here

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಎಸ್‌ಡಿಎಮ್‌ಸಿ ಅಧ್ಯಕ್ಷರಾದ ಪ್ರಭಾಕರ್‌ ದೇವಾಡಿಗ ಅವರು ವಹಿಸಿದ್ದರು.

ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಆಕಾಶ ಕಾಯಗಳ ಬಗ್ಗೆ ಮಕ್ಕಳ ಕುತೂಹಲದ ಪ್ರಶ್ನೆಗಳಿಗೆ ಉತ್ತರಿಸುತ್ತಾ, ಪ್ರತ್ಯಕ್ಷವಾಗಿ ತಂತ್ರಜ್ಞಾನಧ ಮೂಲಕ ಪರಿಚಯಿಸಿ , ಮಕ್ಕಳಿಗೆ ಆಕಾಶ ಕಾಯಗಳ ಬಗ್ಗೆ ಒಂದಷ್ಟು ಮಾಹಿತಿ ನೀಡಿದರು.

ನಂತರ ಟೆಲಿಸ್ಕೋಪ್ ಮೂಲಕ ಗ್ರಹಗಳ ವೀಕ್ಷಣೆ ಮಾಡಲಾಯಿತು. ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು, ಇಲಾಖೆಯ ಅಧಿಕಾರಿಗಳು ಬೇರೆ ಬೇರೆ ಶಾಲೆಯ ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಮುಖ್ಯ ಅತಿಥಿಗಳಾಗಿ ಉಪಾಧ್ಯಕ್ಷರಾದ ಲಲಿತಾ ದೇವೇಂದ್ರ ಶೇಟ್, ಸಂಪನ್ಮೂಲ ವ್ಯಕ್ತಿ ಉಪನ್ಯಾಸಕಿ ಶ್ರೀನಯನ ಮತ್ತು ನಿವೃತ್ತ ಮುಖ್ಯ ಶಿಕ್ಷಕರಾದ ಮಹಾಬಲೇಶ್ವರ ಐತಾಳ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Click here

Click here

Click here

Call us

Call us

ವಿಜ್ಞಾನ ಶಿಕ್ಷಕಿ ಗೀತಾ ಪ್ರಾಸ್ತಾವಿಕ ಮಾತನಾಡಿದರು. ವಿಜ್ಞಾನ ಶಿಕ್ಷಕಿ ಜ್ಯೋತಿ ಮತ್ತು ದೈಹಿಕ ಶಿಕ್ಷಕರಾದ ಬಾಲಕೃಷ್ಣ ನಿರೂಪಿಸಿ, ಶಾಲಾ ಮುಖ್ಯ ಶಿಕ್ಷಕ ತಿಮ್ಮಪ್ಪ ಗಾಣಿಗ ಸ್ವಾಗತಿಸಿ, ಸಹ ಶಿಕ್ಷಕಿ ಶಶಿಕಲಾ ವಂದಿಸಿದರು. ಶಾಲೆಯ ಎಲ್ಲಾ ಶಿಕ್ಷಕರು ಹಾಗೂ ಎಸ್‌ಡಿಎಮ್‌ಸಿ ಸದಸ್ಯರು ಸಹಕರಿಸಿದರು.

Leave a Reply