Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜನವರಿ 29ರಿಂದ 5 ದಿನಗಳ ಕಾಲ ಸುರಭಿ ಬೆಳ್ಳಿಹಬ್ಬದ ಸಂಭ್ರಮ – ಸುರಭಿ ಜೈಸಿರಿ 2025 ವಾರ್ಷಿಕ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಜನವರಿ 29ರಿಂದ 5 ದಿನಗಳ ಕಾಲ ಸುರಭಿ ಬೆಳ್ಳಿಹಬ್ಬದ ಸಂಭ್ರಮ – ಸುರಭಿ ಜೈಸಿರಿ 2025 ವಾರ್ಷಿಕ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ತಾಲೂಕಿನ ಪ್ರತಿಷ್ಠಿತ ಸಾಂಸ್ಕೃತಿಕ ಸಂಸ್ಥೆಯಾದ ಸುರಭಿ ರಿ. ಬೈಂದೂರು ಇದರ ಬೆಳ್ಳಿಹಬ್ಬದ ಸಂಭ್ರಮಾಚರಣೆ – ಸುರಭಿ ಜೈಸಿರಿ ಹಾಗೂ ಬಿಂದುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಜನವರಿ 29 ಜನವರಿಯಿಂದ ಆರಂಭಗೊಳ್ಳಲಿದ್ದು, ಫೆಬ್ರವರಿ 02ರ ತನಕ 5 ದಿನಗಳ ಕಾಲ ಬೈಂದೂರಿನ ಶಾರದಾ ವೇದಿಕೆಯಲ್ಲಿ ಪ್ರತಿದಿನ ಸಂಜೆ 06:30ರಿಂದ ಅದ್ದೂರಿಯಾಗಿ ನಡೆಯಲಿದೆ.

    Click Here

    Call us

    Click Here

    ಸುರಭಿ ಜೈಸಿರಿಗೆ ಚಾಲನೆ:
    ಜನವರಿ 29ರ ಬುಧವಾರ ಸುರಭಿ ಜೈಸಿರಿಗೆ ಚಾಲನೆ ದೊರೆಯಲಿದ್ದು. ಸಚಿವರಾದ ಮಂಕಾಳ ವೈದ್ಯ ಅವರು ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಡಾ. ಎಂ. ಮೋಹನ್ ಆಳ್ವ ಅವರು ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರು ಶುಭಶಂಸನೆಗೈಲಿದ್ದಾರೆ. ಈ ವೇಳೆ ವಿವಿಧ ಕ್ಷೇತ್ರದ ಗಣ್ಯರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ. ಅಂದು ಸುರಭಿಯ ಹಿರಿಯ ಹಿನ್ನೆಲೆ ಕಲಾವಿದ ಚಂದ್ರ ಬಂಕೇಶ್ವರ ಅವರಿಗೆ ಗೌರವಾರ್ಪಣೆ ಸಲ್ಲಿಸಲಾಗುತ್ತದೆ. ಬಳಿಕ ಸುರಭಿ ನೃತ್ಯ ಕಲಾವಿದರಿಂದ ನೃತ್ಯ ವೈವಿಧ್ಯ ಪ್ರದರ್ಶನ ಹಾಗೂ ಚಿತ್ರಕಲಾ ವಿದ್ಯಾರ್ಥಿಗಳಿಂದ ಕುಂಚ ಸಂಭ್ರಮ ಜರುಗಲಿದೆ.

    ಬಿಂದುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ:
    ಜನವರಿ 30ರ ಗುರುವಾರ ಬಿಂದುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದ್ದು, ಚಂದನ ವಾಹಿನಿಯ ʼಥಟ್ ಅಂತ ಹೇಳಿʼ ರಸಪ್ರಶ್ನೆ ಕಾರ್ಯಕ್ರಮದ ನಿರೂಪಕ, ವೈದ್ಯ, ಲೇಖಕ ಡಾ. ನಾ. ಸೋಮೇಶ್ವರ ಅವರಿಗೆ 11ನೇ ಬಿಂದುಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಸಂಸದರಾದ ಬಿ.ವೈ. ರಾಘವೇಂದ್ರ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಶುಭಶಂಸನೆಗೈಯಲಿದ್ದಾರೆ. ಬೈಂದೂರು ಶಾಸಕರಾದ ಗುರುರಾಜ ಗಂಟಿಹೊಳೆ ಅವರು ಅಧ್ಯಕ್ಷತೆ ವಹಿಸಲಿದ್ದು, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಆಶಯ ನುಡಿಗಳನ್ನಾಡಲಿದ್ದಾರೆ. ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಮರವಂತೆ ಅಭಿನಂದನಾ ನುಡಿಗಳನ್ನಾಡಲಿದ್ದು, ನಿವೃತ್ತ ಬ್ಯಾಂಕ್ ಅಧಿಕಾರಿ ಎಚ್. ವಸಂತ ಹೆಗ್ಡೆ ದಿನದ ನುಡಿಗಳನ್ನಾಡಲಿದ್ದಾರೆ. ಅಂದು ಉದ್ಯಮಿ ಜಯಾನಂದ ಹೋಬಳಿದಾರ್ ಅವರಿಗೆ ಗೌರವಾರ್ಪಣೆ ಸಲ್ಲಿಸಲಾಗುತ್ತದೆ. ಈ ವೇಳೆ ವಿವಿಧ ಕ್ಷೇತ್ರದ ಗಣ್ಯರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ. ಬಳಿಕ ಸುರಭಿ ವಿದ್ಯಾರ್ಥಿಗಳಿಂದ ನೃತ್ಯ ನೃತ್ಯಾಂಕುರ ಭರತನಾಟ್ಯ ಹಾಗೂ ದಶಾವತಾರ ನೃತ್ಯ ರೂಪಕ ನಡೆಯಲಿದೆ.

    ಜನವರಿ 31ರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉದ್ಯಮಿ ಆನಂದ ಸಿ. ಕುಂದರ್ ಅವರು ವಹಿಸಿಕೊಳ್ಳಲಿದ್ದು, ಸಹಕಾರಿ ಧುರೀಣ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ಶುಭಶಂಸನೆಗೈಯಲಿದ್ದಾರೆ. ಅಂದು ಸುರಭಿಯ ಹಿರಿಯ ಹಿನ್ನೆಲೆ ಕಲಾವಿದ ಗೋಪಾಲಕೃಷ್ಣ ಜೋಷಿ ಅವರಿಗೆ ಗೌರವಾರ್ಪಣೆ ನಡೆಯಿದೆ. ಬಳಿಕ ಸುರಭಿ ವಿದ್ಯಾರ್ಥಿಗಳಿಂದ ಯಕ್ಷ ನೃತ್ಯ ಮತ್ತು ʼಭಕ್ತ ಸುಧನ್ವʼ ಯಕ್ಷಗಾನ ಪ್ರದರ್ಶನ ನಡೆಯಲಿದೆ.

    ಫೆಬ್ರವರಿ 01ರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಸ್. ರಾಜು ಪೂಜಾರಿ ಅವರು ವಹಿಸಿಕೊಳ್ಳಲಿದ್ದು, ಹಿರಿಯ ಹೃದ್ರೋಗ ತಜ್ಞ ಡಾ. ಪ್ರಭಾಕರ ಹೆಚ್ ಅವರು ಆಶಯ ನುಡಿಗಳನ್ನು, ಕನ್ನಡ ಸಾಹಿತ್ಯ ಪರಿಷತ್ ಕುಂದಾಪುರ ತಾಲೂಕು ಅಧ್ಯಕ್ಷರಾದ ಡಾ. ಉಮೇಶ್ ಪುತ್ರನ್ ಅವರು ಶುಭಶಂಸನೆಯನ್ನು ಮಾಡಲಿದ್ದಾರೆ. ಈ ವೇಳೆ ವಿವಿಧ ಕ್ಷೇತ್ರದ ಗಣ್ಯರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ. ಅಂದು ಸುರಭಿ ಸದಸ್ಯರಿಂದ ಹಾಗೂ ವಿದ್ಯಾರ್ಥಿ ಪೋಷಕರಿಂದ ಶ್ವೇತ ಕುಮಾರ ಯಕ್ಷಗಾನ, ಸುರಭಿ ಸಂಗೀತ ವಿದ್ಯಾರ್ಥಿಗಳಿಂದ ನಾದ ಗಾನಾಮೃತಂ ಹಾಗೂ ಸುರಭಿ ಪ್ರಾಕ್ತನ ವಿದ್ಯಾರ್ಥಿಗಳಿಂದ ʼಗಾನ ನಾಟ್ಯ ವೈವಿಧ್ಯʼ ಜರುಗಲಿದೆ.

    Click here

    Click here

    Click here

    Click Here

    Call us

    Call us

    ಫೆಬ್ರವರಿ 02ರ ಭಾನುವಾರ ನಡೆಯುವ ಸುರಭಿ ಜೈಸಿರಿ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸುರಭಿ ಅಧ್ಯಕ್ಷ ಆನಂದ ಮದ್ದೋಡಿ ಅವರು ವಹಿಸಿಕೊಳ್ಳಲಿದ್ದಾರೆ. ಉದ್ಯಮಿಗಳಾದ ಕೃಷ್ಣಮೂರ್ತಿ ಮಂಜರು ಆಶಯ ನುಡಿಗಳನ್ನಾಡಲಿದ್ದಾರೆ. ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರು ಶುಭಶಂಸನೆಗೈಯಲಿದ್ದಾರೆ. ಈ ವೇಳೆ ವಿವಿಧ ಕ್ಷೇತ್ರದ ಗಣ್ಯರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ. ಅಂದು ಸುರಭಿಯ ಹಿನ್ನೆಲೆ ಕಲಾವಿದರಾದ ಉಮೇಶ್‌ ಮೇಶ್‌ ಶಿರೂರು, ಪೂರ್ಣಿಮಾ ಗುರುರಾಜ್‌ ಆಚಾರ್ಯ ಅವರಿಗೆ ಗೌರವಾರ್ಪಣೆ ನಡೆಯಲಿದೆ. ಬಳಿಕ ರಂಗ ಸುರಭಿ ವಿದ್ಯಾರ್ಥಿಗಳಿಂದ ಕುಂದಾಪ್ರ ಕನ್ನಡದ ಮಕ್ಕಳ ರಾಮಾಯಣ ನಾಟಕ ಪ್ರದರ್ಶನಗೊಳ್ಳಲಿದೆ.

    ಸುರಭಿ ಜೈಸಿರಿಯಲ್ಲಿ ಪ್ರತಿವರ್ಷದಂತೆ ಗುರುವಂದನೆ, ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಜರುಗಲಿದೆ. ಕಳೆದ 25 ವರ್ಷಗಳಿಂದ ಸಂಸ್ಥೆಯಲ್ಲಿ ಕಲಾವಿದರಾಗಿ ಸೇವೆ ಸಲ್ಲಿಸಿದವರಿಗೆ ಸನ್ಮಾನ, ವಿಶೇಷ ಗುರುತಿಸುವಿಕೆ ಮೊದಲಾದ ಕಾರ್ಯಕ್ರಮಗಳು 5 ದಿನಗಳಲ್ಲಿಯೂ ನಡೆಯಲಿದ್ದು ಈ ಎಲ್ಲಾ ಕಾರ್ಯಕ್ರಮಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸುರಭಿ ಅಧ್ಯಕ್ಷ ಆನಂದ ಮದ್ದೋಡಿ ಕಾರ್ಯದರ್ಶಿ ರಾಮಕೃಷ್ಣ ದೇವಾಡಿಗ ಹಾಗೂ ನಿರ್ದೇಶಕ ಸುಧಾಕರ ಪಿ. ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    twenty − 11 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.