ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸರಕಾರಿ ಶಾಲೆಯ ಉಳಿವಿಗೆ ಡಾ. ಗೋವಿಂದ ಬಾಬು ಪೂಜಾರಿ ಅವರು ನೀಡಿರುವ ಕೊಡುಗೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ, ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಸರಕಾರಿ ಶಾಲೆಗಳ ಪ್ರಾಮುಖ್ಯತೆ ಹೆಚ್ಚಿದೆ ಇದಕ್ಕಾಗಿ ನನ್ನ ವತಿಯಿಂದ ಸಹಕಾರ ನೀಡುತ್ತಿದ್ದು ನಮ್ಮೂರ ಶಾಲೆಯ ಉಳುವಿಗೆ ಸಹಕಾರ ನೀಡುವುದು ನಮ್ಮೆಲ್ಲರ ಜವಬ್ದಾರಿ ಎಂದು ಹಿರಿಯ ಉದ್ಯಮಿ ನಾಗರಿಕರಾದ ನಾಡೋಜ ಷಡಕ್ಷರಿ ಅವರು ಹೇಳಿದರು.
ಅವರು ಬಿಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಡಾ. ಗೋವಿಂದ ಬಾಬು ಪೂಜಾರಿ ಅವರು ಆಡಳಿತ ಕಚೇರಿಗೆ ಕೊಡುಗೆಯಾಗಿ ಸುಮಾರು ರೂ. 3ಲಕ್ಷ ವೆಚ್ಚದ ವಿವಿಧ ಸವಲತ್ತುಗಳ ಉದ್ಘಾಟಿಸಿ ಮಾತನಾಡಿದರು.
ಬಳಿಕ ಮಾತನಾಡಿ ಡಾ. ಗೋವಿಂದ ಬಾಬು ಪೂಜಾರಿ ಮಾತನಾಡಿ, ಸರಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ದತ್ತು ಸ್ವೀಕಾರ ಮಾಡಿದ್ದು ಯಾವುದೇ ಖಾಸಗಿ ಶಾಲೆಯ ವ್ಯವಸ್ಥೆಗೆ ಕಡಿಮೆ ಇಲ್ಲದಂತೆ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ಹಮ್ಮಿಕೊಂಡಿದ್ದು ಒಂದೊಂದಾಗಿ ಪೂರ್ಣಗೊಳಿಸಲಾಗುತ್ತಿದೆ ಮಾದರಿ ಶಾಲೆಯನ್ನಾಗಿ ರೂಪಿಸಲು ಕಾರ್ಯಪ್ರರ್ವರ್ತರಾಗಿದ್ದು ಇದಕ್ಕೆ ಹಳೆ ವಿದ್ಯಾರ್ಥಿಗಳು, ಎಸ್‌ಡಿಎಂಸಿ, ಊರ ನಾಗರಿಕರು ಸಹಕಾರ ನೀಡಬೇಕು ಎಂದು ವಿನಂತಿಸಿದರು.
ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿ ಟೇಬಲ್ ಟ್ರಸ್ಟ್ ಹಾಗೂ ಶಾಲೆ ವತಿಯಿಂದ ನಾಡೋಜ ಷಡಕ್ಷರಿ ಅವರನ್ನು ಡಾ. ಗೋವಿಂದ ಬಾಬು ಪೂಜಾರಿ ಸಮ್ಮಾನಿಸಿದರು.
ಈ ಸಂದರ್ಭ ಎಸ್‌ಡಿಎಂಸಿ ಅಧ್ಯಕ್ಷೆ ಶಾರದ ದೇವಾಡಿಗ, ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮಾಜಿ ಧರ್ಮದರ್ಶಿ ಜಯರಾಮ್ ಶೆಟ್ಟಿ ಬಿಜೂರು, ಬಂದೂರು ಕ್ಷೇತ್ರ ಬಿಆರ್‌ಪಿ ಮಂಜುನಾಥ ನಾಯ್ಕ, ಅರುಣ್ ಕುಮಾರ್, ಕ್ರಷ್ಣ ದೇವಾಡಿಗ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಂದೀಶ್ ದೇವಾಡಿಗ, ಅಲಕಾ ಸುರೇಶ್ ಬಿಜೂರು, ತಿಮ್ಮಪ್ಪ ದೇವಾಡಿಗ, ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿ ಟೇಬಲ್ ಟ್ರಸ್ಟ್ ಮೇಲ್ವಿಚಾರಕ ನಾಗರಾಜ್ ಪಿ. ಯಡ್ತರೆ., ಎಸ್. ಸುಬ್ರಹ್ಮಣ್ಯ ಮೊದಲಾದವರು ಉಪಸ್ಥಿತರಿದ್ದರು.
ಹಳೆ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ರಾಜೇಂದ್ರ ಬಿಜೂರು ಪ್ರಾಸ್ತಾವಿಸಿದರು. ಶಾಲೆಯ ಮುಖ್ಯ ಶಿಕ್ಷಕ ಮಂಜುನಾಥ್ ಎಸ್. ಸ್ವಾಗತಿಸಿದರು. ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಕೃಷ್ಣ ದೇವಾಡಿಗ ವಂದಿಸಿದರು.