Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಾಗರಿಕರು ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ: ಕಿರಣ್ ಎಸ್. ಗಂಗಣ್ಣನವರ್
    ಉಡುಪಿ ಜಿಲ್ಲೆ

    ನಾಗರಿಕರು ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ: ಕಿರಣ್ ಎಸ್. ಗಂಗಣ್ಣನವರ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ದೇಶದ ಅರ್ಹ ಪ್ರತಿಯೊಬ್ಬ ನಾಗರಿಕರು ಮತದಾನದ ಹಕ್ಕನ್ನು ಹೊಂದಿ ಚುನಾವಣಾ ಪ್ರಕ್ರೀಯೆಯಲ್ಲಿ ತಪ್ಪದೇ ಸಕ್ರೀಯವಾಗಿ ಭಾಗವಹಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕಿರಣ್ ಎಸ್. ಗಂಗಣ್ಣನವರ್ ಕರೆ ನೀಡಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಪ್ರಜಾಪ್ರಭುತ್ವದ ಪರಿಕಲ್ಪನೆಯು ನಮ್ಮ ಪ್ರಾಚೀನ ಸಂಸ್ಕೃತಿಯಲ್ಲಿ ರಾಜರುಗಳು ತಮ್ಮ ಆಳ್ವಿಕೆಯಲ್ಲಿ ನಡೆಸುತ್ತಿದ್ದ ಸಭೆ, ಓಲಗ, ಒಡ್ಡಲೊಗಳಲ್ಲಿ ಸಮಾಜ ಕಟ್ಟುವಂತಹ ಜನ ಸಮಾನ್ಯರ ಅನಿಸಿಕೆ ಅಭಿಪ್ರಾಯಗಳನ್ನು ಹೇಳಲು ಅವಕಾಶವಿತ್ತು ಇದು ಪ್ರಜಾಪ್ರಭುತ್ವದ ಒಂದು ಅಂಗ, ಪ್ರಸ್ತತ ಪ್ರಜಾಪ್ರಭುತ್ವದಲ್ಲಿ ಸಹಾ ವಿಧಾನಪರಿಷತ್ತು ವಿಧಾನಸಭೆ ಸಂಸತ್ತು ಮೇಲ್ಮನೆ ಕೆಳಮನೆ ಅಂತಹ ಸಂಸ್ಥೆಗಳು ನಿಯಮಾನುಸಾರ ತಮ್ಮ ಕರ್ತವ್ಯಗಳನ್ನು ನಿರ್ವಹಿಸುತ್ತಿವೆ ಎಂದರು.

    ಭಾರತದ ಪ್ರಜಾಸತಾತ್ಮಕ ಸಂಸ್ಥೆಗಳು ಎಷ್ಟು ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿವೆ ಎಂಬ  ಟೀಕೆ ಟಿಪ್ಪಣಿಗಳು ಇರುತ್ತವೆ ನಮ್ಮ ದೇಶದ ಜನ ಸಾಮಾನ್ಯರು ಚುನಾವಣೆಯಲ್ಲಿ ತೋರಿಸುವಂತಹ ಪ್ರಭುದ್ಧತೆಯಿಂದಾಗಿ ಬೇರೆ ಬೇರೆ ಪಕ್ಷಗಳು ಅಧಿಕಾರಕ್ಕೆ ಬಂದರು ಕೂಡ ದೇಶದ ಆಡಳಿತಾತ್ಮಕ ಅಳವಡಿಸಿಕೊಂಡಿರುವಂತಹ ಪ್ರಜಾಸತಾತ್ಮಕ ವ್ಯವಸ್ಥೆ ತನ್ನ ಬಹುರೂಪಿ ಅಸ್ಥತ್ವದಲ್ಲಿ ಕೂಡ ತನ್ನತನವನ್ನು  ಉಳಿಸಿಕೊಂಡಿದೆ ಎಂದರು.

    ದೇಶದಲ್ಲಿ ಕಾಲಕಾಲಕ್ಕೆ ನಡೆಯುವ ಸಂಸತ್, ವಿಧಾನಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಮತದರರು ಭಗವಹಿಸುವು ಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನಲೆಯಲ್ಲಿ ಅವರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಈ ರೀತಿಯ ಮತದಾರರ ದಿನಾಚಾರಣೆ ಆಚರಿಸಲಾಗುತ್ತಿದೆ ಎಂದರು.

    Click here

    Click here

    Click here

    Click Here

    Call us

    Call us

    ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರಕಾರ ಪ್ರತಿಯೊಬ್ಬ ನಾಗರಿಕರಿಗೂ ಹಕ್ಕು ಮತ್ತು ಕರ್ತ್ಯವ್ಯಗಳನ್ನು ನೀಡಿವೆ ಜನರು ತಮ್ಮ ಹಕ್ಕುಗಳನ್ನು ಚಲಾಯಿಸುವ ರೀತಿಯಲ್ಲಿಯೇ ತಮ್ಮ ಜವಬ್ದಾರಿಯ ಕರ್ತವ್ಯವಾದ ಮತದಾನದಲ್ಲಿ ಭಾಗವಹಿಸಬೇಕು ಎಂದರು.

    ಯುವ ಮತದಾರರು ಅರ್ಜಿ ನಮೂನೆ 6 ರ ಅಡಿಯಲ್ಲಿ  ವಾಸ ಸ್ಥಳ ಧೃಡಿಕರಣ ಪತ್ರ ಹಾಗೂ ಛಾಯ ಚಿತ್ರಗಳನ್ನು ನೀಡಿ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೊಂದಾಯಿಸಿಕೊಳ್ಳುವುದರೊAದಿಗೆ ಚುನಾವಣೆ ಪ್ರಕ್ರೀಯೆಗಳಲ್ಲಿ ತೋಡಗಿಸಿಕೊಳ್ಳಬೇಕು ಎಂದರು.

    ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು. ಡಯೇಟ್ ಕಾಲೇಜಿನ ಉಪ ಪ್ರಾಂಶುಪಾಲರು ಅಶೋಕ್ ಕಾಮತ್‌ ಅವರು ಮತದಾನದ ಮಹತ್ವ ಕುರಿತು ಉಪನ್ಯಾಸ ನೀಡಿದರು.

    ಇದೇ ಸಂದರ್ಭದಲ್ಲಿ ಹೊಸದಾಗಿ ಸೇರ್ಪಡೆಯಾದ ಮತದಾರರಿಗೆ ಮತದಾರರ ಗುರುತಿನ ಚೀಟಿಯನ್ನು ಸಾಂಕೇತಿಕವಾಗಿ ವಿತರಿಸಲಾಯಿತು.ಚುನಾವಣಾ ಕರ್ತವ್ಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಸನ್ಮಾನ ಹಾಗೂ ಮತದಾರರ ದಿನಚರಣೆ ಅಂಗವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ ಸ್ಪರ್ಧೆಗಳಲ್ಲಿ ವಿಜೇತರಾದ ಅಭ್ಯರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

    ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ., ಉಡುಪಿ ತಾಲೂಕು ತಹಶೀಲ್ದಾರ್ ಪಿ.ಆರ್ ಗುರುರಾಜ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    ಅಪರ ಜಿಲ್ಲಾಧಿಕಾರಿ (ಪ್ರಭಾರ) ನಾಗರಾಜ ವಿ ನಾಯಕ್ ಸ್ವಾಗತಿಸಿದರೆ, ಅಶೋಕ್ ಕಾಮತ್ ನಿರೂಪಿಸಿ, ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    4 × two =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.