ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ದ್ವಿತೀಯ ಪಿಯುಸಿ ಸ್ಥಳೀಯ ವಿದ್ಯಾರ್ಥಿಗಳಿಗೆ ಶಿಕ್ಷಕ – ಪಾಲಕರ ಸಭೆಯನ್ನು ನಡೆಸಲಾಯಿತು.
ಸಹ ಸಂಸ್ಥಾಪಕರಾದ ಗಣಪತಿ ಭಟ್ ಕೆ. ಎಸ್. ಅವರು ಶೈಕ್ಷಣಿಕ ಮಾಹಿತಿ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಕೂಲಂಕುಷವಾಗಿ ವಿವರಿಸಿದರು.
ಸಂಸ್ಥಾಪಕರಲ್ಲಿ ಓರ್ವರಾದ ಡಾ. ಬಿ. ಗಣನಾಥ ಶೆಟ್ಟಿ ಅವರು ವಿದ್ಯಾರ್ಥಿ – ಪೋಷಕರ ಜವಾಬ್ದಾರಿಯ ಜೊತೆಗೆ, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯ ಬಗ್ಗೆ ಸಂಸ್ಥೆಯ ಕಾಳಜಿಗಳ ಕುರಿತು ಸಮಗ್ರ ವಿವರಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಆಪಲ್ ಸರ್ವಿಸ್ ಶಿವಮೊಗ್ಗದ ವಿಜಯಕುಮಾರ್ ಅವರು ಮುಂದಿನ ಶಿಕ್ಷಣಕ್ಕೆ ದೊರಕುವ ವಿದ್ಯಾರ್ಥಿವೇತನಗಳ ಸಂಕ್ಷಿಪ್ತ ಮಾಹಿತಿಗಳನ್ನು ಒದಗಿಸಿದರು.
ಕನ್ನಡ ಉಪನ್ಯಾಸಕಿ ಪ್ರಿಯಾಂಕ ತೀರ್ಥರಾಮ ಅವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.















