ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬೆಂಗಳೂರಿನ ಟೌನ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹೋಟ್ ಅವರು ಬೈಂದೂರು ವಲಯದ ಆಲೂರು ಸರಕಾರಿ ಪ್ರೌಢಶಾಲೆಯ ಶಿಕ್ಷಕ ಉದಯ ಕುಮಾರ್ ಶೆಟ್ಟಿ ಅವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಮತದಾರ ಸಾಕ್ಷರತಾ ಕ್ಲಬ್ ಸಂಚಾಲಕ ಪುರಸ್ಕಾರವನ್ನು ನೀಡಿ ಗೌರವಿಸಲಾಗಿದೆ.
ಈ ವೇಳೆ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ ಮೀನಾ, ಬಿ.ಬಿ.ಎಂ.ಪಿ ಆಯುಕ್ತ ತುಷಾರ ಗಿರಿನಾಥ್ ಉಪಸ್ಥಿತರಿದ್ದರು.