Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್: ಆನ್‌ಲೈನ್ ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್: ಆನ್‌ಲೈನ್ ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮುಖ್ಯಮಂತ್ರಿಗಳು 2024-25 ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಿದ್ದರು.

    Click Here

    Call us

    Click Here

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು.

    ನೇಮಕಾತಿ ಆದೇಶ/ವೇತನ ಪತ್ರ/ಬ್ಯಾಂಕ್ ಸ್ಟೇಟ್‌ಮೆಂಟ್ ಗಳಲ್ಲಿ ಯಾವುದಾದರೂ ದಾಖಲೆಗಳನ್ನು ಸೇವಾನುಭವಕ್ಕಾಗಿ ಒದಗಿಸಬೇಕು. ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ  ಬಸ್ಸುಗಳಲ್ಲಿ ಜಿಲ್ಲಾ ವ್ಯಾಪ್ತಿಗೆ ಉಚಿತವಾಗಿ ಸಂಚರಿಸಬಹುದು. ತಹಸೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ ಒದಗಿಸಬೇಕು.

    ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುವ ವರದಿಗಾರರಿಗೆ ಪ್ರತಿ ತಾಲ್ಲೂಕಿಗೆ ಸಂಪಾದಕರು ಸೂಚಿಸುವ ಒಬ್ಬರಿಗೆ, ಜಿಲ್ಲಾ ಮಟ್ಟದ ಪತ್ರಿಕೆಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಒಬ್ಬರಿಗೆ, ಆರು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಓರ್ವ ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್ ಎಂಟು ಅಥವಾ ಹೆಚ್ಚು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಇಬ್ಬರು ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್‌ಗೆ ಬಸ್ ಪಾಸ್ ಪಡೆಯಲು ಅವಕಾಶವಿದೆ. ಉಪಗ್ರಹ ಆಧಾರಿತ ವಿದ್ಯುನ್ಮಾನ ವಾಹಿನಿಗಳ ವರದಿಗಾರರು ತಾಲೂಕು ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ ಪ್ರತಿ ತಾಲ್ಲೂಕಿಗೆ ಓರ್ವ ಕ್ಯಾಮರಾಮ್ಯಾನ್ ಹಾಗೂ ಓರ್ವ ವರದಿಗಾರರು ಬಸ್ ಪಾಸ್ ಪಡೆಯಬಹುದಾಗಿದೆ.

    ದಿನಪತ್ರಿಕೆಗಳು ಹಾಗೂ ಉಪಗ್ರಹ ಸುದ್ದಿ ವಾಹಿನಿಗಳ ಸಂಪಾದಕರು ನೀಡುವ ನೇಮಕಾತಿ ಪತ್ರ ಹಾಗೂ ಶಿಫಾರಸ್ಸು ಆಧರಿಸಿ ಅರ್ಹ ಪತ್ರಕರಿಗೆ ಬಸ್ ಪಾಸ್‌ಗಳನ್ನು ನೀಡಲಾಗುವುದು. ಆಸಕ್ತ ಹಾಗೂ ಅರ್ಹ ಪತ್ರಕರ್ತರು ತಮ್ಮ ಸಮೀಪದ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಿಗೆ ತೆರಳಿ ಸೇವಾಸಿಂಧು ಪೋರ್ಟಲ್ ನಲ್ಲಿ ಆನ್‌ಲೈನ್ ಮೂಲಕ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದು.ಅಪ್‌ಲೋಡ್ ಮಾಡಿದ ದಾಖಲೆಗಳು ಹಾಗೂ ಆನ್‌ಲೈನ್ ಅರ್ಜಿಯ ಮುದ್ರಿತ ಪ್ರತಿಯನ್ನು ತಮ್ಮ ಜಿಲ್ಲೆಯ ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿಗೆ ಸ್ವಯಂ ದೃಢೀಕರಿಸಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    nineteen − 3 =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.