ಕುಂದಾಪ್ರ ಡಾಟ್ ಕಾಂ ಸುದ್ದಿ.
ಶಂಕರನಾರಾಯಣ: ಇಲ್ಲಿನ ಶಂಕರನಾರಾಯಣ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಉಮೇಶ್ ಶೆಟ್ಟಿ ಕಲ್ಗದ್ದೆ, ಉಪಾಧ್ಯಕ್ಷರಾಗಿ ಕೃಷ್ಣಮೂರ್ತಿ ಡಿ. ಶೇಟ್ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ನಿರ್ದೇಶಕರಾದ ಸಚ್ಚಿದಾನಂದ ವೈದ್ಯ, ಮಂಜುನಾಥ್ ಕುಲಾಲ್, ವಿಜಯ್ ಮಡಿವಾಳ, ರವಿ ಕುಲಾಲ್, ಮಮತಾ ಆರ್ ಶೆಟ್ಟಿ, ಲತಾ ಡಿ ಎಸ್, ಗಿರಿಜಾ, ರಾಜೀವ ಶೆಟ್ಟಿ, ರಾಮಚಂದ್ರ ದೇವಾಡಿಗ, ಸದಾಶಿವ ಶೆಟ್ಟಿ, ಕೃಷ್ಣ ನಾಯಕ್ ಉಪಸ್ಥಿತರಿದ್ದರು.
ಸಂಘದ ಅಧ್ಯಕ್ಷ ಹಾಗೂಉಪಧ್ಯಕ್ಷ ಹುದ್ದಗಳಿಗೆ ಶನಿವಾರ ಚುನಾವಣೆ ನಡೆಯಿತು. ಚುನಾವಣಾಧಿಕಾರಿ ಸುಮಿತ್ರಾ ಕುಮಾರಿ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಹಕರಿಸಿದರು.