ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಮೊವಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ದಾನಿ ಸುರೇಶ ಮೊಗವೀರ ತ್ರಾಸಿ ಇವರು ಜಿನ್‌ಟೆಕ್ಸ್ ಕಂಪೆನಿಯ ಸಹಯೋಗದೊಂದಿಗೆ ಉಚಿತವಾಗಿ ನೀಡಿದ ಸಮವಸ್ತ್ರಗಳ ವಿತರಣಾ ಕಾರ್ಯಕ್ರಮವು ಶಾಲೆಯ ಸಭಾಂಗಣದಲ್ಲಿ ನಡೆಯಿತು.
ಸಮವಸ್ತ್ರವನ್ನು ವಿತರಿಸಿ ಮಾತನಾಡಿದ ಸುರೇಶ ಮೊಗವೀರ, ಸರಕಾರಿ ಶಾಲೆಗಳ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ ಕಾರ್ಯಕ್ರಮ ರೂಪಿಸಲಾಗಿದೆ. ಶಾಲೆಯ ಅಭಿವೃದ್ಧಿಯಲ್ಲಿ ಕೈಜೋಡಿಸಲಾಗುವುದು ಎಂದರು.
ಇದೇ ಸಂದರ್ಭ ದಾನಿ ಸುರೇಶ ಮೊಗವೀರ ಅವರನ್ನು ಸನ್ಮಾನಿಸಲಾಯಿತು. ತಾಲೂಕು ಪಂಚಾಯತ್ ಸಾಮಾಜಿಕ ಪರಿಷತ್ತಿನ ಕಾರ್ಯಕ್ರಮ ವ್ಯವಸ್ಥಾಪಕ ಸುರೇಂದ್ರ, ಎಸ್‌ಡಿಎಂಸಿ ಅಧ್ಯಕ್ಷೆ ಸಂಧ್ಯಾ ಕಾರಂತ್, ತ್ರಾಸಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಹೇಮಾ, ಎಸ್‌ಡಿಎಂಸಿ ಸದಸ್ಯರು, ಹಳೆ ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.
ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ ಖಾರ್ವಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಾಲೆಯ ಮುಖ್ಯ ಶಿಕ್ಷಕಿ ಶರಾವತಿ ಸ್ವಾಗತಿಸಿದರು. ರಜನಿ ದಾನಿಗಳನ್ನು ಪರಿಚಯಿಸಿದರು. ಭಾಗೀರಥಿ ಕಾರ್ಯಕ್ರಮ ನಿರ್ವಹಿಸಿದರು. ವತ್ಸಲಾ ವಂದಿಸಿದರು.