Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಕ್ರಮ ವಹಿಸಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಕ್ರಮ ವಹಿಸಿ: ಜಿಲ್ಲಾಧಿಕಾರಿ

    Updated:04/02/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಮುಂಬರುವ ಬೇಸಿಗೆ ದಿನಗಳಲ್ಲಿ ಜನಸಾಮಾನ್ಯರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಜಿಲ್ಲೆಯಾದ್ಯಂತ ಪ್ರಸಕ್ತ ಸಾಲಿಗೆ ವಾಡಿಕೆ ಮಳೆಯು 4,535 ಮಿ.ಮೀ. ಇದ್ದು, ವಾಸ್ತವಿಕವಾಗಿ 5261 ಮಿ.ಮೀ. ನಷ್ಟು ಮಳೆಯಾಗಿ ಶೇ.16 ರಷ್ಟು ಹೆಚ್ಚು ಮಳೆಯಾಗಿದ್ದು, ನೀರಿನ ಕೊರತೆ ಆಗುವ ಸಾಧ್ಯತೆಗಳಿಲ್ಲದಿದ್ದರೂ ಸಹ ಅಂತರ್ಜಲ ಕುಸಿತಗೊಂಡು ಜಿಲ್ಲೆಯ ಯಾವುದೇ ಗ್ರಾಮ ಹಾಗೂ ವಾರ್ಡ್ಗಳಲ್ಲಿ ನೀರಿನ ಸಮಸ್ಯೆ ಉಂಟಾಗಬಹುದು. ಈ ಬಗ್ಗೆ ಗಮನಹರಿಸುವುದರೊಂದಿಗೆ ಹತ್ತಿರದಲ್ಲಿ ಲಭ್ಯತೆ ಇರುವ ನೀರಿನ ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ತಿಳಿಸಿದರು.

    ಕಳೆದ ಸಾಲಿನಲ್ಲಿ ಉಂಟಾದ ಮನೆ ಹಾನಿ, ಮಾನವ ಜೀವ ಹಾನಿ, ಜಾನುವಾರು ಜೀವ ಹಾನಿ, ಬೆಳೆ ಹಾನಿ ಸೇರಿದಂತೆ ಮತ್ತಿತರ ಹಾನಿಯ ಪರಿಹಾರ ಹಣವನ್ನು ಬಾಕಿ ಉಳಿಸಿಕೊಳ್ಳುವಂತಿಲ್ಲ ಎಂದ ಅವರು, ಮಳೆಯಿಂದ ಹಾನಿಯಾದ ಶಾಲಾ ಕಟ್ಟಡ, ಅಂಗನವಾಡಿ ಕಟ್ಟಡ ಹಾಗೂ ರಸ್ತೆ ದುರಸ್ತಿಗೆ ಈಗಾಗಲೇ ಅನುದಾನ ಬಿಡುಗಡೆಯಾಗಿದ್ದು, ತ್ವರಿತವಾಗಿ ಕಾಮಗಾರಿಗಳು ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಿಲ್ಲೆಯಲ್ಲಿ ಈವರೆಗೆ ಕುಡಿಯುವ ನೀರಿನ ಸಮಸ್ಯೆ ಕುರಿತು ದೂರುಗಳು ಕೇಳಿ ಬಂದಿರುವುದಿಲ್ಲ. ಒಂದು ವೇಳೆ ದೂರುಗಳಿದ್ದಲ್ಲಿ ಜಿಲ್ಲಾಡಳಿತದ ಗಮನಕ್ಕೆ ತರಬೇಕು ಎಂದ ಅವರು, ಜಿಲ್ಲೆಯ ಹಲವು ಕಡೆಗಳಲ್ಲಿ ನೀರು ಸರಬರಾಜು ಮಾಡುವ ಪೈಪ್‌ಲೈನ್‌ಗಳು ಒಡೆದುಹೋಗಿರುವ ಕುರಿತು ಮಾಹಿತಿ ಕೇಳಿ ಬಂದಿರುತ್ತದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ದುರಸ್ಥಿ ಕಾರ್ಯವನ್ನು ಕೈಗೊಳ್ಳಲು ಕ್ರಮ ವಹಿಸಬೇಕು ಎಂದರು.

    Click here

    Click here

    Click here

    Click Here

    Call us

    Call us

    ಜಿಲ್ಲೆಯ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಸಾಕಷ್ಟು ಮೇವನ್ನು ದಾಸ್ತಾನು ಇಟ್ಟುಕೊಳ್ಳುವಂತೆ ತಹಶೀಲ್ದಾರರುಗಳು ನೋಡಿಕೊಳ್ಳಬೇಕು. ಏಪ್ರಿಲ್-ಮೇ ತಿಂಗಳಲ್ಲಿ ಮೇವಿನ ಕೊರತೆಯಾಗುವ ಹಿನ್ನೆಲೆ, ಈ ತಿಂಗಳ ಅಂತ್ಯದಿಂದಲೇ ಹಸಿಮೇವನ್ನು ಬೆಳೆಯಲು ಕ್ರಮವಹಿಸುವಂತೆ ಕೃಷಿ, ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. 

    ತಾಲೂಕು ಮಟ್ಟದ ಟಾಸ್ಕ್ಫೋರ್ಸ್ ಸಮಿತಿಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುವುದರೊಂದಿಗೆ ಬರ ನಿರ್ವಹಣೆ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಿ, ಜನಸಾಮಾನ್ಯರಿಗೆ ಕುಡಿಯುವ ನೀರಿನ ಸಮಸ್ಯೆ ಹಾಗೂ ಜಾನುವಾರುಗಳ ಮೇವಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದ ಅವರು, ಗ್ರಾಮ ಪಂಚಾಯತ್‌ನಲ್ಲಿಯೂ ಸಹ ಟಾಸ್ಕ್ಫೋರ್ಸ್ ಸಮಿತಿಗಳನ್ನು ರಚಿಸುವುದರೊಂದಿಗೆ ಬರ ಪರಿಸ್ಥಿಯನ್ನು ನಿಭಾಯಿಸಲು ಸನ್ನದ್ದರಾಗಿರಬೇಕು ಎಂದರು. 

    ಅಂತರ್ಜಲ ಮಟ್ಟ ಕಡಿಮೆಯಾವುದನ್ನು ತಡೆಗಟ್ಟುವ ಸಲುವಾಗಿ ಹಾಗೂ ಸಮುದ್ರದ ಉಪ್ಪು ನೀರು ನದಿಯ ಸಿಹಿ ನೀರಿಗೆ ಸೇರದಂತೆ ಈಗಾಗಲೇ ಜಿಲ್ಲೆಯಲ್ಲಿರುವ ಎಲ್ಲಾ 666 ಕಿಂಡಿ ಆಣೆಕಟ್ಟುಗಳಿಗೆ ಹಲಗೆಗಳನ್ನು ಅಳವಡಿಸಲಾಗಿದೆ ಎಂದ ಅವರು, ಬತ್ತಿಹೋಗಿರುವ ಸರ್ಕಾರಿ ಬಾವಿಗಳಿಗೂ ಸಹ ಮಳೆ ನೀರಿನ ಕೊಯ್ಲನ್ನು ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದರು.

    ಮಳೆಗಾಲದಲ್ಲಿ ಪ್ರವಾಹ ಸೇರಿದಂತೆ ಮತ್ತಿತರ ತುರ್ತು ಪರಿಸ್ಥಿತಿಯನ್ನು ನಿಭಾಯಿಸುವ ಕುರಿತು ಎನ್.ಡಿ.ಆರ್.ಎಫ್ ತಂಡದಿಂದ ಮಂಗಳವಾರ ಮೋಕ್ ಡ್ರಿಲ್ (ಅಣುಕು ಪ್ರದರ್ಶನ) ವನ್ನು ಉದ್ಯಾವರ ನದಿಯ ಬಳಿಯಲ್ಲಿ ಬೆಳಗ್ಗೆ 9.30 ಕ್ಕೆ ಆಯೋಜಿಸಲಾಗಿದ್ದು, ಈ ಅಣುಕು ಪ್ರದರ್ಶನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಧಿಕಾರಿಗಳು, ಸಾರ್ವಜನಿಕರು ಭಾಗವಹಿಸುವುದರೊಂದಿಗೆ, ಸ್ವಯಂ ರಕ್ಷಣೆ ಮಾಡುವ ಕುರಿತು ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದರು.

    ಜಿಲ್ಲಾ ವಿಪತ್ತು ನಿರ್ವಹಣಾ ಕ್ರಮಕ್ಕೆ ಈಗಾಗಲೇ ಪಿ.ಡಿ ಖಾತೆಯಲ್ಲಿ 10.15 ಕೋಟಿ ರಷ್ಟು ಅನುದಾನ ಲಭ್ಯವಿದೆ. ಈಗಾಗಲೇ ತಾಲೂಕು ಮಟ್ಟದ ತಹಶೀಲ್ದಾರರ ವಿಪತ್ತು ಪಿ.ಡಿ ಖಾತೆಯಲ್ಲಿ 1.53 ಕೋಟಿ ರೂ. ಅನುದಾನ ಲಭ್ಯವಿದ್ದು, ಬರ ನಿರ್ವಹಣೆಗೆ ಯಾವುದೇ ಕೊರತೆ ಇರುವುದಿಲ್ಲ ಎಂದರು.

    ಸಭೆಯಲ್ಲಿ ಪ್ರಭಾರ ಅಪರ ಜಿಲ್ಲಾಧಿಕಾರಿ ನಾಗರಾಜ್ ವಿ ನಾಯಕ್, ಸಹಾಯಕ ಕಮೀಷನರ್ ಮಹೇಶ್ಚಂದ್ರ, ಪೌರಾಯುಕ್ತ ಉದಯ್ ಕುಮಾರ್ ಶೆಟ್ಟಿ, ತಾಲೂಕುಗಳ ತಹಶೀಲ್ದಾರ್‌ಗಳು, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಎನ್.ಡಿ.ಆರ್.ಎಫ್ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    11 − six =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.