ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ರೈಲು ಡಿಕ್ಕಿ ಹೊಡೆದು ಯುವಕ ಮೃತಪಟ್ಟ ಘಟನೆ ಕಿರಿಮಂಜೇಶ್ವರ ಗ್ರಾಮದ ನಾಗೂರಿನಲ್ಲಿ ನಡೆದಿದೆ. ಮೃತನನ್ನು ಬಿಜೂರು ಗ್ರಾಮದ ದೀಟಿಮನೆ ನಿವಾಸಿ ವಾಸುದೇವ ದೇವಾಡಿಗ (25) ಎಂದು ಗುರುತಿಸಲಾಗಿದೆ.
ಸೆಂಟ್ರಿಂಗ್ ವೃತ್ತಿ ಮಾಡಿಕೊಂಡಿರುವ ಅವರು ಕಲ್ಲಂಗಡಿ ಬೆಳೆಗಾರರು. ಫೆ.4ರಂದು ಕೆಲಸ ಮುಗಿಸಿಕೊಂಡು ಮನೆಗೆ ಹೋಗುವ ಸಂದರ್ಭ ರೈಲ್ವೆ ಹಳಿಯ ವಾಹನ ನಿಲ್ಲಿಸಿ ತಾನು ಬೆಳೆದ ಕಲ್ಲಂಗಡಿ ಹಣ್ಣು ಲೋಡ್ ಮಾಡಿ ರಸ್ತೆಯಲ್ಲಿ ಜತೆ ಕೆಲಸಗಾರ ರೊಂದಿಗೆ ಮಾತನಾಡಿಕೊಂಡು ಹೋಗೋಣ ಎಂದು ರೈಲ್ವೆ ಹಳೆ ದಾಟುವ ವೇಳೆ ಆಕಸ್ಮಿಕವಾಗಿ ರೈಲು ಡಿಕ್ಕಿ ಹೊಡೆದಿದೆ. ಡಿಕ್ಕಿಯಿಂದ ತಪ್ಪಿಸಿಕೊಳ್ಳಲು ಅವರು ಯತ್ನಿಸಿದರಾದರೂ ದುರ್ದೈವ ಎಂಬಂತೆ ಮುಖ ಭಾಗಕ್ಕೆ ರೈಲು ಡಿಕ್ಕಿ ಹೊಡೆದು ಉರುಳಿದ್ದು, ತಲೆಗೆ ಗಂಭೀರ ಏಟು ತಗುಲಿ ಸಾವನ್ನಪ್ಪಿದ್ದಾರೆ.
ಸಹೋದರ ವಿಕ್ರಮ್ ನೀಡಿದ ದೂರಿನಂತೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.