Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ರಾಷ್ಟ್ರಮಟ್ಟದ ಗ್ರೀನ್ ಸ್ಕೂಲ್ ಅವಾರ್ಡ್
    ಊರ್ಮನೆ ಸಮಾಚಾರ

    ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ರಾಷ್ಟ್ರಮಟ್ಟದ ಗ್ರೀನ್ ಸ್ಕೂಲ್ ಅವಾರ್ಡ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಪರಿಸರ ಸ್ನೇಹಿ ಕಾರ್ಯಕ್ರಮಗಳೊಂದಿಗೆ ಗುಣಮಟ್ಟದ ಶಿಕ್ಷಣಕ್ಕೆ ಹೆಸರುವಾಸಿಯಾಗಿರುವ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು ನಾಲ್ಕನೇಯ ಬಾರಿಗೆ ರಾಷ್ಟ್ರಮಟ್ಟದ ಪ್ರತಿಷ್ಟಿತ ಗ್ರೀನ್ ಸ್ಕೂಲ್ ಅವಾರ್ಡನ್ನು ತನ್ನದಾಗಿಸಿಕೊಂಡು, ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿಈ ಪ್ರಶಸ್ತಿಯನ್ನು ಪಡೆದ ಉಡುಪಿ ಜಿಲ್ಲೆಯ ಏಕೈಕ ಶಾಲೆ ಎಂಬ ಹಿರಿಮೆಗೆ ಪಾತ್ರವಾಯಿತು.

    Click Here

    Call us

    Click Here

    ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸೆಂಟರ್ ಫಾರ್ ಸೈನ್ಸ್ ಮತ್ತು ಎನ್ವಿರಾನ್‌ಮೆಂಟ್ (ಸಿಎಸ್‌ಇ) ಈ ಪ್ರಶಸ್ತಿಯನ್ನು ನೀಡುತ್ತಿದ್ದು, ಈ ಬಾರಿ 9,000 ಕ್ಕೂ ಹೆಚ್ಚು ಶಾಲೆಗಳು ಸ್ಪಧೆಯಲ್ಲಿ ಭಾಗವಹಿಸಿದ್ದವು. ಶುದ್ಧ ಗಾಳಿ, ಇಂಧನ, ಆಹಾರ, ಭೂಮಿ, ನೀರು, ತ್ಯಾಜ್ಯದ ವ್ಯವಸ್ಥಿತ ನಿರ್ವಹಣೆಯ ಮಾನದಂಡದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.

    ಡೆಲ್ಲಿಯ ಇಂಡಿಯನ್ ಹೆಬಿಟ್ಯಾಟ್‌ನ ಸ್ಟೈನ್ ಅಡಿಟೋರಿಯಂನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವು ನಡೆದಿದ್ದು, ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ  ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರ ಮತ್ತು ಶಾಲೆಯ ಆಡಳಿತಾಧಿಕಾರಿ ವೀಣಾರಶ್ಮಿ ಎಮ್. ಸಮಾರಂಭದಲ್ಲಿ ಪಾಲ್ಗೊಂಡು, ಸಂಸ್ಥೆಯ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು.

    ಸೆಂಟರ್ ಫಾರ್ ಸೈನ್ಸ್ ಮತ್ತು ಎನ್ವಿರಾನ್‌ಮೆಂಟ್ (ಸಿಎಸ್‌ಇ)ನ ಮಹಾ ನಿರ್ದೇಶಕರಾದ ಸುನೀತಾ ನಾರಾಯಣ್ ಹಾಗೂ ಲಡಾಕ್‌ನ ಮುಖ್ಯ ಶಿಕ್ಷಣ ತಜ್ಞರು ಹಾಗೂ ಪರಿಸರವಾದಿಗಳಾದ ಸೋನಮ್ ವಾಂಗ್‌ಚಕ್ ಪ್ರಶಸ್ತಿಯನ್ನು ಹಸ್ತಾಂತರಿಸಿದರು.

    ಸಂಸ್ಥೆಯು ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಗಳಿಸಿಕೊಂಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿ ಮಾತನಾಡಿದ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ  ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರ ಗ್ರೀನ್ ಸ್ಕೂಲ್ ಅವಾರ್ಡ್ ನಮ್ಮ ಸಂಸ್ಥೆಗೆ ಸಂದ ಅತ್ಯುನ್ನತ ಗೌರವವಾಗಿದ್ದು, ನಮ್ಮ ಸಂಸ್ಥೆಯಲ್ಲಿರುವ ಸುಸಜ್ಜಿತ ವ್ಯವಸ್ಥೆಗಳೇ ಈ ಪ್ರಶಸ್ತಿ ಪಡೆಯುವಲ್ಲಿ ಪ್ರಧಾನ ಪಾತ್ರ ವಹಿಸಿವೆ.

    Click here

    Click here

    Click here

    Click Here

    Call us

    Call us

    ನಮ್ಮ ಶಾಲೆಯಲ್ಲಿ ಅಳವಡಿಸಲಾಗಿರುವ ಸೋಲಾರ್ ಪವರ್ ಗ್ರಿಡ್‌ಗಳಿಂದ ಪ್ರಾಥಮಿಕ ಶಾಲೆಯ ಎಲ್ಲಾ ಕಾರ್ಯಚಟುವಟಿಕೆಗಳು ವ್ಯವಸ್ಥಿತವಾಗಿ ಸಾಗುತ್ತಿವೆ. ಮಳೆನೀರು ಕೊಯ್ಲಿನ ಮೂಲಕ ಮಳೆನೀರನ್ನು ಸಂಗ್ರಹಿಸಿ, ಅದು ಭೂಮಿಯೊಳಗೆ ಇಂಗುವಂತೆ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳೇ ಕೈದೋಟವನ್ನು ನಿರ್ಮಿಸಿದ್ದು, ಅಲ್ಲಿ ಬೆಳೆದಿರುವ ತರಕಾರಿಗಳನ್ನು ನಿತ್ಯದ ಅಡುಗೆಗೆ ಬಳಸಲಾಗುತ್ತಿದೆ. ನಮ್ಮಲ್ಲಿ ಸುವ್ಯವಸ್ಥಿತವಾಗಿ ಔಷಧಿಯ ಗಿಡಗಳನ್ನು ಬೆಳೆಸುತ್ತಿದ್ದು, ಅದಕ್ಕಾಗಿಯೇ ಪ್ರತ್ಯೇಕ ವನವನ್ನು ನಿರ್ಮಿಸಲಾಗಿದೆ. ಶೈಕ್ಷಣಿಕ ಚಟುವಟಿಕೆಗಳ ಪ್ರತಿ ಹಂತದಲ್ಲಿಯೂ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಅಗತ್ಯತೆಯ ಕುರಿತಾಗಿ ಮಾಹಿತಿ ಒದಗಿಸಿ, ಅವರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    19 − 2 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.