ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಸಿದ್ದಾಪುರದ ಶ್ರೀ ಕೃಷ್ಣ ಭವನದ ಬಳಿ ನಡೆದುಕೊಂಡು ಹೋಗುತ್ತಿದ್ದ ಸ್ಥಳೀಯ ಜವಳಿ ಅಂಗಡಿ ಮಾಲಿಕ ಆನಂದ ಶೆಟ್ಟಿ ಅವರಿಗೆ ಸ್ಕೂಟರೊಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ತಕ್ಷಣ ಅವರನ್ನು ಶಂಕರನಾರಾಯಣ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಪರಿಶೀಲಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಯ ಅಗತ್ಯ ಇರುವುದಾಗಿ ತಿಳಿಸಿದರು. ಈ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಶಂಕರನಾರಾಯಣ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










