ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯ ಪೋಷಕರ ಸಭೆಯು ಸಂಸ್ಥೆಯ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಡಾ. ಎ.ವಿ ಬಾಳಿಗಾ ಆಸ್ಪತ್ರೆ ಉಡುಪಿ ಇಲ್ಲಿಯ ಕ್ಲಿನಿಕಲ್ ಮನಶ್ಯಾಸ್ತ್ರಜ್ಞರಾದ ನಾಗರಾಜಮೂರ್ತಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ “ಪರಿಣಾಮಕಾರಿ ಪೋಷಕತ್ವ”ದ ಬಗ್ಗೆ ತಿಳಿಸಿದರು.
ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರೇಷ್ಮಾ ಡಿಸೋಜಾ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿಸೋಜಾ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಆರಂಭದಲ್ಲಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ ಅವರು ಸರ್ವರನ್ನು ಸ್ವಾಗತಿಸಿದರು. ಸಂಯೋಜಕ ಶಿಕ್ಷಕ ರವೀಂದ್ರ ಪೂಜಾರಿ ಕಾರ್ಯಕ್ರಮವನ್ನು ನಿರೂಪಿಸಿ, ಪ್ರೌಢಶಾಲಾ ಸಂಯೋಜಕ ಶಿಕ್ಷಕ ಮಾಧವ ವಂದನಾರ್ಪಣೆಗೈದರು.