ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ವಡ್ಡರ್ಸೆಯ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ದೇವಸ್ಥಾನದ ಪ್ರಾಂಗಣದಲ್ಲಿ ನಡೆಯಿತು.
ಉದ್ಯಮಿ ನಾಗೇಂದ್ರ ಅಡಿಗ ವಡ್ಡರ್ಸೆ, ಮಾಲಕರು, ಹೋಟೆಲ್ ಗಣೇಶ ಗ್ರಾಂಡ್ ಆಗುಂಬೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಕೊತ್ತಾಡಿ ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ಕಾಲೇಜಿನ ಸಾಂಸ್ಕೃತಿಕ ಸಾಧನೆಗಳನ್ನು, ಶೈಕ್ಷಣಿಕ ಕ್ರಿಯಾ ಚಟುವಟಿಕೆಗಳನ್ನು ಸಾದರಪಡಿಸಿದರು.
ಈ ಸಂದರ್ಭ ಅಮಾಸೆಬೈಲು ಡ್ಯುಯಲ್ ಸ್ಟಾರ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ಪ್ರಕಾಶ್ ಆಚಾರ್ ಶುಭ ಹಾರೈಸಿದರು. ವಡ್ಡರ್ಸೆ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾರಂಗದ ಅಧ್ಯಕ್ಷ ಸಚಿನ್ ಕುಮಾರ್ ಶೆಟ್ಟಿ ಆಶಯ ನುಡಿಗಳನ್ನಾಡಿದರು. ಉಡುಪಿ ಪೊಲೀಸ್ ಠಾಣೆಯ ಆರಕ್ಷಕರಾದ ಮಂಜುನಾಥ ಶೆಟ್ಟಿ ಕೊತ್ತಾಡಿ ದಿಕ್ಸೂಚಿ ನುಡಿಗಳನ್ನಾಡಿದರು.
ಮುಖ್ಯ ಅತಿಥಿಗಳಾಗಿ ಶ್ರೀ ಗಣೇಶ್ ಜುವೆಲರ್ಸ್ ಮಾಲಕರಾದ ಪದ್ಮನಾಭ ಆಚಾರ್, ವಡ್ದರ್ಸೆ, ವಿನುತಾ ಶೆಟ್ಟಿ ಕೊತ್ತಾಡಿ, ಮಂಜುಳಾ ವೀರೇಂದ್ರ ಶೆಟ್ಟಿ ಕೊತ್ತಾಡಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ರಾಜೀವಿ ಎಸ್. ಶೆಟ್ಟಿ, ಅಚ್ಲಾಡಿ ಸನ್‌ಶೈನ್ ಗೆಳೆಯರ ಬಳಗದ ಅಧ್ಯಕ್ಷ ಗಿರೀಶ್ ಎಂ.ಎನ್., ಸತೀಶ್ ಶೆಟ್ಟಿ ಶಾಖಾ ಪ್ರಬಂಧಕರು ಸಿ.ಎ. ಬ್ಯಾಂಕ್ ಗುಂಡ್ಮಿ, ವಡ್ಡರ್ಸೆಯ ಪಿ.ಕೆ. ಸ್ಟುಡಿಯೋ ಮಾಲೀಕರಾದ ಪ್ರವೀಣ್ ಕುಮಾರ್, ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ವೀಣಾ ವಾಸುದೇವ ಭಟ್, ಘಟಕ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ದೀಪಾ ಪೂಜಾರಿ ಉಪಸ್ಥಿತರಿದ್ದರು.
ಕಾಲೇಜಿನ ಉಪ-ಪ್ರಾಂಶುಪಾಲ ಹಾಗೂ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿದರು, ಸ್ವಯಂಸೇವಕ ಸುಜಯ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಸಾನ್ವಿ ವಂದಿಸಿ, ಶ್ರದ್ಧಾ ಆರ್. ಕಾರ್ಯಕ್ರಮ ನಿರೂಪಿಸಿದರು