ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭೇಟಿ ನೀಡಿ, ಶ್ರೀ ದೇವಿಗೆ ಚಂಡಿಕಾ ಹೋಮ ಪೂಜೆ ಮಾಡಿಸಿದರು.

ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಕೆ. ಬಾಬು ಹೆಗ್ಡೆ, ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಶೆಟ್ಟಿ ಶ್ರೀ ದೇವಿಯ ಪ್ರಸಾದ ಹಾಗೂ ಸ್ಮರಣಿಕೆ ನೀಡಿ ಗೌರವಿಸಿದರು. ಮಾನ್ಯ ಶಾಸಕರಾದ ಗುರುರಾಜ್ ಗಂಟಿಹೊಳೆ, ಪಂಚಾಯತ್ ಸದಸ್ಯರು ಶಿವರಾಮ್ ಕೃಷ್ಣ ಭಟ್ ಉಪಸ್ಥಿತರಿದ್ದರು.